3:02 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆಪೂರಕ: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟದಲ್ಲಿ ಅಶ್ವಿನ್ ನಾಯ್ಕ್

28/01/2024, 23:26

ಮಂಗಳೂರು(reporterkarnataka.com): ಯಾವುದೇ ಕ್ರೀಡೆ ಮಾನಸಿಕ ದೈಹಿಕ ಆರೋಗ್ಯಕ್ಕೆ ಪೂರಕ ಎಂದು ಅಂತಾರಾಷ್ಟ್ರೀಯ ಮೋಟಾರ್ ರ್ಯಾಲಿ ಚ್ಯಾಂಪಿಯನ್ ಅಶ್ವಿನ್ ನಾಯ್ಕ್ ಹೇಳಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ವನ್ನುದ್ದೇಶಿಸಿ ಮಾತನಾಡಿದರು.
ಪತ್ರಕರ್ತರ ಒತ್ತಡದ ಕಾರ್ಯ ನಿರ್ವಹಣೆಯ ನಡುವೆ ವಾರ್ಷಿಕ ಕ್ರೀಡಾ ಕೂಟ ಹಮ್ಮಿಕೊಂಡಿರುವುದು ಉತ್ತಮ.ಈ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದಕ್ಕೆ ಸಂತಸವಾಗಿದೆ ಎಂದು ಅಶ್ವಿನ್ ನಾಯ್ಕ್ ತಿಳಿಸಿದ್ದಾರೆ.
ಸಮಾರಂಭವನ್ನು ಉದ್ಘಾಟಿಸಿದ ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಶುಭ ಹಾರೈಸಿದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಹಿರಿಯ ಕ್ರೀಡಾಪಟು ಕಸ್ತೂರಿ ಬಾಲಕೃಷ್ಣ ಪೈ,ದತ್ತಾತ್ರೇಯ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ , ರಾಜೇಶ್ ಪೂಜಾರಿ,ಕಾರ್ಯಕ್ರಮ ಸಂಯೋಜಕರಾದ ವಿಲ್ಫೆಡ್ ಡಿ ಸೋಜ, ದಯಾ ಕುಕ್ಕಾಜೆ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು