5:09 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ದೈನಂದಿನ ಅಹಾರದಲ್ಲಿ ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

20/01/2025, 20:30

ಬಳ್ಳಾರಿ(reporterkarnataka.com): ಕಲಬೆರೆಕೆ ರಹಿತ ಮತ್ತು ಆರೋಗ್ಯವಂತರಾಗಿರಲು ಸಿರಿಧಾನ್ಯದಿಂದ ತಯಾರಿಸಿದ ಆಹಾರವನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿ ಬದುಕಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ ನಗರದ ರೈಲ್ವೆ ನಿಲ್ದಾಣ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಿರಿಧಾನ್ಯ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದೆ. ರಾಸಾಯನಿಕ ಗೊಬ್ಬರ ಇಲ್ಲದೇ ಬೆಳೆಯುವ ಬೆಳೆ ಅಂದರೆ ಅವು ಸಿರಿಧಾನ್ಯಗಳು. ಹೀಗಾಗಿ ಮನೆಗಳಲ್ಲಿ ಹೆಚ್ಚಾಗಿ ಸಿರಿಧಾನ್ಯಗಳನ್ನು ಉಪಯೋಗಿಸಬೇಕು ಎಂದರು.
ಜಂಕ್‌ಫುಡ್ ಉಪಯೋಗಿಸುವುದರಿಂದ ಚಿಕ್ಕ ವಯಸ್ಸಿನಲ್ಲಿಯೇ ಆರೋಗ್ಯ ಕೆಡುತ್ತಲಿದೆ. ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಗಳ ಬಳಕೆಯಿಂದಾಗುವ ಮಹತ್ವ ಕುರಿತು ಜಾಗೃತಿ ಹೆಚ್ಚಿದ್ದು, ಸಿರಿಧಾನ್ಯ ಬಳಕೆಯೂ ಕೂಡ ಹೆಚ್ಚಾಗುತ್ತಿದೆ. ಹಾಗಾಗಿ ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಎಂದರು.
ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಮಾತನಾಡಿ, ಸಿರಿಧಾನ್ಯಗಳಿಂದ ವಿವಿಧ ಖಾದ್ಯಗಳನ್ನು ತಯಾರಿಸುವ ಬಗೆಯ ಕುರಿತು ಜಾಗೃತಿ ಮೂಡಿಸಲು ಸಿರಿಧಾನ್ಯ ಪಾಕಸ್ಪರ್ಧೆ, ಸಿರಿಧಾನ್ಯ ಜಾಥಾ ಹಾಗೂ ಇದೇ ಜನವರಿ 23 ರಿಂದ 25 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರಾಷ್ಟ್ರೀಯ ವಾಣಿಜ್ಯ ಮೇಳ, ಸಾವಯವ ಮತ್ತು ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದ್ದು, ನಾವೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳೋಣ ಎಂದರು.
ಸಿರಿಧಾನ್ಯಗಳಲ್ಲಿ ನಾರು, ಕಬ್ಬಿಣದ ಅಂಶಗಳು ಹಾಗೂ ಕಾರ್ಬೋಹೈಡೇಟ್‌ಗಳು ಹೆಚ್ಚಾಗಿವೆ. ರೋಗ ನಿರೋಧಕ ಶಕ್ತಿ ಇರುವುದರಿಂದ ಪೌಷ್ಠಿಕತೆಯ ಖಣಜಗಳೇ ಆಗಿವೆ. ಅಕ್ಕಿ, ಗೋಧಿಗಿಂತ ಐದು ಪಟ್ಟು ಪ್ರೋಟಿನ್, ವಿಟಮಿನ್, ನಾರಿನಾಂಶ ಹಾಗೂ ಖನಿಜಗಳನ್ನು ಹೊಂದಿವೆ. ಸಿರಿಧಾನ್ಯಗಳನ್ನು ಉಪಯೋಗಿಸುವುದರಿಂದ ರಕ್ತದೊತ್ತಡ, ಮಧುಮೇಹ ಬರಲ್ಲ ಎಂದು ತಿಳಿಸಿದರು.
ಇದಕ್ಕೂ ಮುನ್ನ ಸಿರಿಧಾನ್ಯ ನಡಿಗೆ ಜಾಥಾಗೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಸದಸ್ಯ ಗಾದೆಪ್ಪ, ರೈತ ಮುಖಂಡರಾದ ಪುರು಼ಷೋತ್ತಮ ಗೌಡ, ಐನಾಥ ರೆಡ್ಡಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು ಹಾಗು ಇತರರು ಸೇರಿ ಚಾಲನೆ ನೀಡಲಾಯಿತು.

ಜಾಥಾವು ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ, ಜೈನ್ ಮಾರ್ಕೆಟ್, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿತು.
ಜಾಥಾ ನಡಿಗೆ ಉದ್ದಕ್ಕೂ ಸಿರಿಧ್ಯಾನ ಸೇವಿಸಿ ಅನಾರೋಗ್ಯ ದೂರವಿರಿಸಿ, ನವಣೆ ನಮ್ಮ ಆರೋಗ್ಯದ ನಿರ್ವಹಣೆ, ಜೋಳ ಇಲ್ಲದ ಊಟ ಬರೀ ಗೋಳಾಟ, ಸಿರಿಧಾನ್ಯ ಬಳಸು ಬಳ್ಳೆಯ ಜೀವನ ನಡೆಸು, ರಾಗಿ ಬಳಸಿ ಆರೋಗ್ಯ ಉಳಿಸಿ, ಬರಗು ಇದ್ದರೆ ಬರಗಾಲದಲ್ಲೂ ಬದುಕು ಎನ್ನುವ ಫಲಕಗಳನ್ನು ಪ್ರರ್ದಶಿಸಲಾಯಿತು.
ನಂತರ ಸವಿಯಲು ಸಿರಿಧಾನ್ಯಗಳಿಂದ ತಯಾರಿಸಿದ ನವಣೆ ಪಾಯಸ, ನವಣೆ ಬಾತ್, ಸಜ್ಜೆಯಿಂದ ಮಾಡಿದ್ದ ಉಪ್ಪಿಟ್ಟು ಹಾಗೂ ನವಣೆಯಿಂದ ಮಾಡಿದ ಅಂಬಲಿ ಟೀ ಮಾಡಲಾಗಿತ್ತು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕೃಷಿ ಉಪನಿರ್ದೇಶಕ ಮಂಜುನಾಥ.ಎಸ್.ಎನ್., ಸಹಾಯಕ ಕೃಷಿ ನಿರ್ದೇಶಕ ದಯಾನಂದ ಸೇರಿದಂತೆ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರು, ಕೃಷಿ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು