9:23 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು

20/10/2022, 10:27

ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರಿ ಪ್ರದರ್ಶನ ಕಾಣುವ ಮೂಲಕ ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಯ ಪರಿಚಯ ಮಾಡಿಸುವುದು ಮಾತ್ರವಲ್ಲದೆ ಮಹತ್ವವನ್ನು ಸಾರುತ್ತಿದೆ.
ನಟ ರಿಷಬ್ ಶೆಟ್ಟಿ ಭೂತ ಕೋಲ ದೈವರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು, ಇದೀಗ ಈ ಮಾತಿಗೆ ನಟ ಚೇತನ್ ತಮ್ಮದೇ ಶೈಲಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ,ಎನ್ನುವ ನಟ ಚೇತನ್ ವಿವಾದಾತ್ಮಕ ಹೇಳಿಕೆಗೆ ಎಲ್ಲಾ ಕಡೆಯಿಂದ ಆಕ್ರೋಶಗಳು ವ್ಯಕ್ತವಾಗಿದೆ.

ಈ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಕಳ, ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೂ ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ನಟ ಚೇತನ ಕುಮಾರ್ ವಿರುದ್ದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ನಗರ ಸಂಯೋಜಕ ಸಂದೀಪ್ ಕಾರ್ಲ, ಬೋಳ ಸದಾಶಿವ ಶೆಟ್ಟಿ , ದೀಪಕ್ ಬೈಲೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು