11:23 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ

16/09/2021, 08:47

ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು  ವಿಧಾನಸೌಧದ ಸಮಿತಿ ಕಚೇರಿಯಲ್ಲಿ ನಡೆದ ಸೆಪ್ಟೆಂಬರ್ 17ರಂದು ನಡೆಯುವ ಬೃಹತ್ ಲಸಿಕಾ ಮೇಳದ ಕುರಿತು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 1,50,000 ಲಸಿಕಾಕರಣ ಗುರಿಯನ್ನು ನೀಡಲಾಗಿದ್ದು, ಜಿಲ್ಲೆಯ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆಯನ್ನು ನೀಡುವ ಕೆಲಸವಾಗಬೇಕು ಹಾಗೂ ಈ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.
ಸೆಪ್ಟೆಂಬರ್ 17ರಂದು ಸರಿಯಾದ ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಪೂರ್ವ ಸಿದ್ಧತಾ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್
ಕಾಲೇಜುಗಳ ವೈದ್ಯಕೀಯ ಸಿಬ್ಬಂದಿಗಳ ಸಹಯೋಗ ಪಡೆದುಕೊಂಡು
ಜಿಲ್ಲಗೆ ನೀಡಿದ ಗುರಿಯನ್ನು ಸಾಧಿಸಿ ಎಂದು ಕರೆ ನೀಡಿದರು.
ಸಂಬಂಧಪಟ್ಟ ಅಧಿಕಾರಿಗಳು ಗಡಿಭಾಗದ ಗ್ರಾಮಗಳು ಹಾಗೂ ನಗರ ಪ್ರದೇಶದಲ್ಲಿ ಕೊಳಗೇರಿಗಳಲ್ಲಿ ವಾಸಿಸುವ ಮನೆಗಳಿಗೆ ಭೇಟಿ ನೀಡಿ ಹಾಗೂ ಹೆಚ್ಚು ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯಲು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಮಾತನಾಡಿ, ಸೆಪ್ಟೆಂಬರ್ 17ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಮನೆಮನೆಗೆ ತೆರಳಿ ಲಸಿಕೆ ಪಡೆಯದೇ ಇರುವವರ ಮಾಹಿತಿ ಪಟ್ಟಿಯನ್ನು ಪಡೆದುಕೊಂಡು ಲಸಿಕೆ ಹಾಕಿಕೊಳ್ಳಲು ಬರುವಂತೆ ತಿಳಿ ಹೇಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯಾ ಗ್ರಾಮ ಸಹಾಯಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಪ್ರತಿ ಪಂಚಾಯಿತಿಗಳಲ್ಲಿ ಸಭೆ ನಡೆಸಿ ಬೃಹತ್ ಲಸಿಕೆ ಮೇಳದ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕಿಶೋರ್, ಡಿಯುಡಿಸಿ ಗಾಯತ್ರಿ ನಾಯಕ್ ಹಾಗೂ ಮತ್ತಿತರ ವೈದ್ಯಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು