ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್: ನಳಿನ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
13/05/2021, 15:34
ಬೆಂಗಳೂರು(reporterkarnataka news):
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್ ಸ್ಥಿತಿಗತಿಗಳ ಕುರಿತು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನೂರು ವೆಂಟಿಲೇಟರ್ ಗಳ ಅವಶ್ಯಕತೆ ಇರುವುದನ್ನು ತಿಳಿಸಿದರು. ನಳಿನ್ ಕುಮಾರ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ವೆಂಟಿಲೇಟರ್ ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಕೋವಿಡ್ ವಿರುದ್ಧ ಹೋರಾಟದಲ್ಲಿ ಸರ್ಕಾರದ ಕೋವಿಡ್ ನಿಯಮಗಳು ಮತ್ತು ವ್ಯವಸ್ಥೆಗಳ ಜೊತೆಗೆ ಜನಸಾಮಾನ್ಯರ ಜವಾಬ್ದಾರಿಯೂ ಅತೀ ಮುಖ್ಯವಾಗಿ ಇರುವುದರಿಂದ, ರಾಜ್ಯದ ಜನತೆ ಸರ್ಕಾರದ ಜೊತೆಗೆ ಕೈಜೋಡಿಸಿ, ಸಹಕರಿಸುವಂತೆ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ ಮೂಲಕ ಜನತೆಗೆ ಮನವಿ ಮಾಡಿದರು.