11:19 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್: ನಳಿನ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

13/05/2021, 15:34

ಬೆಂಗಳೂರು(reporterkarnataka news):

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್ ಸ್ಥಿತಿಗತಿಗಳ ಕುರಿತು ಚರ್ಚಿಸಿದರು. 

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನೂರು ವೆಂಟಿಲೇಟರ್ ಗಳ ಅವಶ್ಯಕತೆ ಇರುವುದನ್ನು ತಿಳಿಸಿದರು. ನಳಿನ್ ಕುಮಾರ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ವೆಂಟಿಲೇಟರ್ ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಕೋವಿಡ್ ವಿರುದ್ಧ ಹೋರಾಟದಲ್ಲಿ ಸರ್ಕಾರದ ಕೋವಿಡ್ ನಿಯಮಗಳು ಮತ್ತು ವ್ಯವಸ್ಥೆಗಳ ಜೊತೆಗೆ ಜನಸಾಮಾನ್ಯರ ಜವಾಬ್ದಾರಿಯೂ ಅತೀ ಮುಖ್ಯವಾಗಿ ಇರುವುದರಿಂದ, ರಾಜ್ಯದ ಜನತೆ ಸರ್ಕಾರದ ಜೊತೆಗೆ ಕೈಜೋಡಿಸಿ, ಸಹಕರಿಸುವಂತೆ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ ಮೂಲಕ ಜನತೆಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು