4:56 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ದಕ್ಷಿಣ ಆಫ್ರಿಕಾದಲ್ಲಿ ರಣಭೀಕರ ಮಳೆ, ಭಾರಿ ಪ್ರವಾಹ: 45 ಮಂದಿ ಸಾವು

14/04/2022, 00:57

ಕೇಪ್ ಟೌನ್(reporterkarnataka.com): ದಕ್ಷಿಣ ಆಫ್ರಿಕಾದ ಡರ್ಬನ್ ಪ್ರದೇಶದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಕನಿಷ್ಠ 45 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 

ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರವಾಹದಲ್ಲಿ ಹಲವರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕ್ವಾಝುಲು-ನಟಾಲ್ ಪ್ರಾಂತ್ಯದ ಬಂದರು, ಪ್ರಮುಖ ಹೆದ್ದಾರಿಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಡರ್ಬನ್ ಮತ್ತು ಸುತ್ತಮುತ್ತಲಿನ ಇ-ಥೆಕ್ವಿನಿ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ದಕ್ಷಿಣ ಆಫ್ರಿಕಾದ ಮಿಲಿಟರಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.ಪ್ರವಾಹದಿಂದಾಗಿ ಅಮ್ಲಟುಜಾನಾ ನದಿಯ ದಡದಲ್ಲಿದ್ದ ಪುರಾತನ ಕಾಲದ ದೇವಾಲಯ ಸಂಪೂರ್ಣ ಕೊಚ್ಚಿಹೋಗಿದೆ. ಮನೆಗಳು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ.

ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಜನ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಮನೆಗಳಲ್ಲಿ ಸಿಲುಕಿರುವ ಜನರ ಸಹಾಯಕ್ಕಾಗಿ ಸಹಾಯವಾಣಿ ತೆರೆದಿರುವುದಾಗಿ ತುರ್ತು ಸೇವೆಗಳ ವಕ್ತಾರ ರಾಬರ್ಟ್ ಮೆಕೆಂಜಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು