7:27 PM Monday24 - November 2025
ಬ್ರೇಕಿಂಗ್ ನ್ಯೂಸ್
ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ದೂರಿ ಕಪಿಲಾ ಆರತಿ: ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ

14/12/2024, 13:42

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿ ಸ್ನಾನಘಟ್ಟದ ಬಳಿ ಶುಕ್ರವಾರ ರಾತ್ರಿ ಕಪಿಲ ಆರತಿ ಕಾರ್ಯಕ್ರಮ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.


ನಂಜನಗೂಡು ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 8ನೇ ವರ್ಷದ ಕಪಿಲ ಆರತಿ ಕಾರ್ಯಕ್ರಮ ಇದಾಗಿದೆ.
ಉತ್ತರ ಭಾರತದ ಗಂಗಾ ನದಿಯಲ್ಲಿ ಆಚರಿಸುವ ಗಂಗಾರತಿ ಮಾದರಿಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯಲ್ಲಿ ಆಯೋಜಿಸಲಾಗಿದ್ದ ಕಪಿಲಾರತಿ ಕಾರ್ಯಕ್ರಮ ಆಗಿದೆ. ಕಾರ್ಯಕ್ರಮದ ಅಂಗವಾಗಿ ಜೊಂಡು ಹಾಗೂ ತ್ಯಾಜ್ಯಗಳಿಂದ ಕೂಡಿದ್ದ ಕಪಿಲಾ ನದಿ ಸ್ನಾನಘಟ್ಟ ಹಾಗೂ ಹದಿನಾರು ಕಾಲು ಮಂಟಪದ ಬಳಿ ಸ್ವಚ್ಛಗೊಳಿಸಿ ವಿದ್ಯುತ್ ದೀಪಗಳಿಂದ ಅಲಂಕರಿಸಿ ಇಡೀ ನದಿಯ ದಡ ಜಗ ಮಗಿಸುವಂತಿತ್ತು .
ನದಿ ಮಧ್ಯ ಭಾಗದಲ್ಲಿ ಕಪಿಲ ಆರತಿಗಾಗಿ ಭವ್ಯವೇದಿಕೆಯನ್ನು ನಿರ್ಮಾಣ ಮಾಡಿ ಕನ್ನಡ ಮಾತೆ ಭುವನೇಶ್ವರಿ ಪುತ್ಥಳಿ ಪ್ರತಿಷ್ಠಾಪಿಸಿ ಇಡೀ ವೇದಿಕೆಯನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು .
ಭವ್ಯವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದೀಪ ಹಾಗೂ ಜ್ಯೋತಿ ಹಚ್ಚುವ ಮೂಲಕ ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ಹಾಗೂ ಸಾಲೂರು ಮಠದ ಡಾ. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಡಗೂರು ವಿರಕ್ತಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಚಾಲನೆ ನೀಡಿದರು.
ಬಳಿಕ ವಿಪ್ರರ ವೇದ ಘೋಷದೊಂದಿಗೆ ಭಾರತ ದೇಶದ ಹಲವಾರು ಪುಣ್ಯ ನದಿಗಳ ಹೆಸರಿನಲ್ಲಿ ದೂಪ, ದೀಪ, ಆರತಿ ಕಾರ್ಯಕ್ರಮಗಳು ನಡೆದವು ನೆರೆದಿದ್ದ ಸಾವಿರಾರು ಭಕ್ತರು ಕಪಿಲಾರತಿಯ ದೃಶ್ಯವನ್ನು ಕಣ್ತುಂಬಿ ಕೊಂಡರು.
ಇದೇ ಮೊದಲ ಬಾರಿಗೆ ನಂಜನಗೂಡು ಹಾಗೂ ಕಪಿಲಾ ನದಿಯ ಇತಿಹಾಸ ಸಾರುವ ಲೇಸರ್ ಶೋ ನಡೆಸಲಾಯಿತು. ಅಲ್ಲದೆ ಭಕ್ತಿ ಗೀತೆ ಸೇರಿದಂತೆ ಕಪಿಲಾ ನದಿ ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಸಾವಿರಾರು ಭಕ್ತರು ದೀಪಗಳನ್ನು ಹಚ್ಚುವ ಮೂಲಕ ಕಪಿಲಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ದಿವ್ಯ ಸಾನಿಧ್ಯ ವಹಿಸಿದ್ದ ಹರಿಹರ ಮಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ಆಶೀರ್ವಚನ ನೀಡಿ ಕಾರ್ಯಕ್ರಮ ಆಯೋಜನೆ ಮಾಡಿದ ಯುವ ಬ್ರಿಗೇಡ್ ಸಂಘಟನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸ್ಥಳ ಪುರೋಹಿತರಾದ ಕೃಷ್ಣ ಜೋಯಿಸ್ ಯುವ ಬ್ರಿಗೇಡ್ ಮುಖಂಡರುಗಳಾದ ಚಂದ್ರಶೇಖರ್, ಸುನಿಲ್, ಕಿಶೋರ್, ಚಂದನ್, ಶ್ರೀನಿವಾಸ್, ನಿತಿನ್, ಗಿರೀಶ್, ರವಿ ಶಾಸ್ತ್ರಿ, ಮಹದೇವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು