8:57 PM Wednesday3 - September 2025
ಬ್ರೇಕಿಂಗ್ ನ್ಯೂಸ್
ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ

11/07/2024, 16:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ಮಂಗಳವಾರ ಬೆಳಿಗ್ಗೆಯಿಂದಲೇ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾದ ಕಲ್ಯಾಣೋತ್ಸವದಲ್ಲಿ ಬುಧವಾರ ಸಂಜೆ 5:00 ಗಂಟೆಗೆ ಶ್ರೀ ನಂಜುಂಡೇಶ್ವರರ ಕಾಶಿಯಾತ್ರೆ ನಡೆಯಿತು. ಕಾಶಿಯಾತ್ರೆಯಲ್ಲಿ ಬಣ್ಣ ಬಣ್ಣದ ಹೂವು ಹಾಗೂ ವಜ್ರ ವೈಡೂರ್ಯಗಳಿಂದ ಅಲಂಕರಿಸಲಾದ ಶ್ರೀ ನಂಜುಂಡೇಶ್ವರರ ಉತ್ಸವ ಮೂರ್ತಿಯನ್ನು ಹಲವು ಜಾನಪದ ಕಲಾ ತಂಡಗಳೊಂದಿಗೆ ದೇವಾಲಯದ ಸುತ್ತ ಮೆರವಣಿಗೆ ನಡೆಸಲಾಯಿತು.
ನಂದಿಧ್ವಜ, ನಂದಿ ಕಂಬ ಕುಣಿತ, ಹುಲಿ ವೇಷ, ವೀರಗಾಸೆ, ಪೂಜಾ ಕುಣಿತ, ಒನಕೆ ನೃತ್ಯ, ಗಾಡಿ ಗೊಂಬೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕಾಶಿಯಾತ್ರೆಗೆ ಮೆರಗು ನೀಡಿದವು.
ಕಾಶಿಯಾತ್ರೆ ಮುಗಿಸಿ ಬಂದ ಶ್ರೀ ಯವರ ಉತ್ಸವ ಮೂರ್ತಿಯನ್ನು ದೇವಾಲಯದ ಮುಂಭಾಗ ಇರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕೃತ ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಶ್ರೀ ಯವರ ಉತ್ಸವ ಮೂರ್ತಿ ಎದುರಿಗೆ ಇರಿಸಿ ಸಂಬಂಧ ಮಾಲೆ ಕಾರ್ಯಕ್ರಮ ನಡೆಸಲಾಯಿತು.
ಸಂಬಂಧ ಮಾಲೆ ನಂತರ ಶಿವ ಪಾರ್ವತಿ ಯವರ ಉತ್ಸವ ಮೂರ್ತಿಗಳನ್ನು ದೇವಾಲಯದ ಕಲ್ಯಾಣ ಮಂಟಪದಲ್ಲಿರಿಸಿ ಶಾಸ್ತ್ರೋಕ್ತವಾಗಿ ಶುಭ ಮಕರ ಲಗ್ನದಲ್ಲಿ ಧಾರಾ ಮಹೋತ್ಸವ ನಡೆಸಲಾಯಿತು .
ಗಿರಿಜಾ ಕಲ್ಯಾಣ ಮಹೋತ್ಸವಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡು ಸೇವೆ ಸಲ್ಲಿಸಿದರು.
ಇದೇ ಸಂದರ್ಭ ಸೇವಾರ್ಥದಾರರಿಗೆ ಸುಮಂಗಲಿಯರು ಪರಸ್ಪರ ಅರಿಶಿನ ಕುಂಕುಮ, ಬಳೆ, ಹೂ ನೀಡಿ ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಆಗಮಿಕರಾದ ಈ ನಾಗಚಂದ್ರ ದೀಕ್ಷಿತ್ ಮಾತನಾಡಿ ಗಿರಿಜಾ ಕಲ್ಯಾಣ ಮಹೋತ್ಸವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮಕ್ಕೆ ಬಂದ ಭಕ್ತರೊಬ್ಬರು ಮಾತನಾಡಿ ಗಿರಿಜಾ ಕಲ್ಯಾಣೋತ್ಸವದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಸತೀಶ್ ದಂಪತಿಗಳು ಸೇರಿದಂತೆ ದೇವಾಲಯದ ಅರ್ಚಕ ವೃಂದ ದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು