ಇತ್ತೀಚಿನ ಸುದ್ದಿ
ದಕ್ಷಿಣ ಕಾಶಿಯಲ್ಲಿ ಹಕ್ಕು ಚಲಾಯಿಸಿದ ದಕ್ಷಿಣ ಶಿಕ್ಷಕರು: 11 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ
03/06/2024, 19:58

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಇಂದು ಮತದಾನ ನಡೆಯಿತು.
ಬೆಳಿಗ್ಗೆಯಿಂದಲೇ ಪ್ರಾರಂಭವಾದ ಮತದಾನ ಪ್ರಕ್ರಿಯೆ ಮತಗಟ್ಟೆಯತ್ತ ಶಿಕ್ಷಕರು ತೆರಳಿ, ತಮ್ಮ ಹಕ್ಕನ್ನು ಚಲಾಯಿಸಿದರು.
ಕಾಂಗ್ರೆಸ್ ಮತ್ತು ಜನತಾದಳ-ಬಿಜೆಪಿ ಮೈತ್ರಿಕೂಟ, ಬಿಎಸ್ಪಿ ಸೇರಿದಂತೆ 11 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಲ್ಕು ಜಿಲ್ಲೆಗಳಿಂದ ಸುಮಾರು 21.549 ಮಂದಿ ಶಿಕ್ಷಕರು ಮತದಾರರು ಇದ್ದು, 11988 ಪುರುಷರು, 9550 ಮಹಿಳೆಯರು, ಓರ್ವ ತೃತೀಯ ಲಿಂಗಿ ಶಿಕ್ಷಕ ಮತದಾರರಿದ್ದಾರೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 750 ಶಿಕ್ಷಕ ಮತದಾರರಿದ್ದು, ಇದರಲ್ಲಿ 479 ಪುರುಷ ಮತದಾರರು, 271 ಮಹಿಳಾ ಮತದಾರರಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯೊಂದಿಗೆ ಮತದಾನ ನಡೆಸಲಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ, ಮೈತ್ರಿ ಅಭ್ಯರ್ಥಿ ವಿವೇಕಾನಂದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶಾಲಾ ಕಾಲೇಜುಗಳ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.