9:35 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿಯ ನಂಜುಂಡೇಶ್ವರ ಮತ್ತೆ ಕೋಟ್ಯಾಧೀಶ: 35 ಹುಂಡಿ ಎಣಿಕೆ; ನಂಜುಂಡನಿಗೆ 1.72 ಕೋಟಿ ಕಾಣಿಕೆ

15/05/2024, 11:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶ ನಾಗಿದ್ದಾನೆ. ನಂಜುಂಡೇಶ್ವರನ ದೇಗುಲಕ್ಕೆ ಭಕ್ತರಿಂದ ದೇಣಿಗೆ ಹರಿದುಬಂದಿದ್ದು ಹುಂಡಿ ಎಣಿಕೆ ಕಾರ್ಯದಲ್ಲಿ ಇದು ಸಾಬೀತಾಗಿದೆ. ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 1.72 ಕೋಟಿ ರೂ. ನಗದು , 92 ಗ್ರಾಂ 50 ಮಿಲಿಗ್ರಾo ಚಿನ್ನ ಹಾಗೂ 3 ಕೆಜಿ 500 ಗ್ರಾಂ ಬೆಳ್ಳಿ ಲಭ್ಯವಾಗಿದೆ.
ಮಂಗಳವಾರ ದೇವಾಲಯದ ದಾಸೋಹ ಭವನದ ಆವರಣದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಒಟ್ಟು 35 ಹುಂಡಿಗಳನ್ನ ತೆಗೆದು ಎಣಿಕೆ ಮಾಡಲಾಯಿತು. ಈ ವೇಳೆ 1.72, 85, 296 ರೂ. ಲಭ್ಯವಾಗಿದ್ದು, ಇದರೊಂದಿಗೆ 92 ಗ್ರಾo 50 ಮಿಲಿ ಗ್ರಾಂ ಚಿನ್ನ , 3 ಕೆಜಿ 500 ಗ್ರಾಂ ಬೆಳ್ಳಿ, ಹಾಗೂ 33 ವಿದೇಶಿ ಕರೆನ್ಸಿ ಲಭ್ಯವಾಗಿದೆ. ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರಿಂದ ಹುಂಡಿಯಲ್ಲಿ ಈ ಪ್ರಮಾಣದ ಹಣದ ಮೊತ್ತ ಸಂಗ್ರಹವಾಗಿದೆ.


ಎಣಿಕೆ ಕಾರ್ಯದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸತೀಶ್, ವೆಂಕಟೇಶ್ ಪ್ರಸಾದ್, ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್ ವಿದುಲತಾ, ಬ್ಯಾಂಕ್ ಆಫ್ ಬರೋಡಾ ಮ್ಯಾನೇಜರ್ ಕಾರ್ತಿಕ್ ಸೇರಿದಂತೆ ಸ್ವಸಹಾಯ ಸಂಘದ ಮಹಿಳೆಯರು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು