11:56 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಹಬ್ಬದ ಪ್ರಯುಕ್ತ ಪರೀಕ್ಷೆ ಮುಂದೂಡಲು ದ.ಕ. ಜಿಲ್ಲಾ ಎನ್.ಎಸ್.ಯು.ಐ. ಆಗ್ರಹ

12/10/2026, 23:55

ಮಂಗಳೂರು(reporterkarnataka.com): ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜ್ ಹಾಗೂ ಕೆನರಾ ಕಾಲೇಜ್ ನಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ಆಯೋಜಿಸಿರುವುದನ್ನು ಮರುಪರಿಶೀಲಿಸಿ ಪರೀಕ್ಷೆಯನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸುಹಾನ್ ಆಳ್ವ ಆಗ್ರಹಿಸಿದ್ದಾರೆ.

ಮಂಗಳೂರಿನ ದಸರಾ ಹಬ್ಬವು ಕರಾವಳಿ ಕರ್ನಾಟಕದ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ಆಚರಣೆಯಾಗಿದ್ದು, ದಸರಾ ಉತ್ಸವದಲ್ಲಿ ಭಾಗವಹಿಸುವುದು ಅನೇಕ ವಿದ್ಯಾರ್ಥಿಗಳ ಆಸೆಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭಾವನೆಗಳಿಗೆ ಹಾಗೂ ಹಬ್ಬದ ಆಚರಣೆಗೆ ಗೌರವ ನೀಡಿ ಪರೀಕ್ಷೆಯನ್ನು ಮುಂದೂಡಲು ಕಾಲೇಜು ಆಡಳಿತ ಮಂಡಳಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕು.
ಇಂದು ಎಬಿವಿಪಿ ಕಾರ್ಯಕರ್ತರು ದಿಢೀರನೆ ಪ್ರತಿಭಟನೆ ನಡೆಸಿರುವ ಕ್ರಮ ಸರಿಯಾದ ವಿಧಾನವಲ್ಲ.ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮೊದಲು ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿ, ಸೌಹಾರ್ದಯುತವಾಗಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕಿತ್ತು. ಆದರೆ ಎಬಿವಿಪಿ ನಡೆ ಸರಿಯಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಸಂವಾದ ಮತ್ತು ಮಾತುಕತೆಗೆ ಆದ್ಯತೆ ನೀಡುವುದು ಅಗತ್ಯವಾಗಿದೆ.

ಹಬ್ಬದ ಆಚರಣೆಯ ಹಕ್ಕು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಪರಿಗಣಿಸಿ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಅನಗತ್ಯ ಗೊಂದಲ ಉಂಟಾಗದಂತೆ ಪರೀಕ್ಷೆಯನ್ನು ಮುಂದೂಡಿ ಎಲ್ಲರಿಗೂ ಅನುಕೂಲವಾಗುವ ಪರಿಹಾರ ಕಂಡುಕೊಳ್ಳಬೇಕು ಎಂದು ಸುಹಾನ್ ಆಳ್ವ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು