4:23 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದ.ಕ ಜಿಲ್ಲೆ | ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆಗಳ ಘಟಕ ಶೀಘ್ರ ಆರಂಭಿಸಲು ಒತ್ತಾಯಿಸಿ ಹಕ್ಕೊತ್ತಾಯ ಧರಣಿ

09/09/2026, 12:02

ಮಂಗಳೂರು(reporterkarnataka.com): ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಬೇಕು, ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗಳ ಘಟಕಗಳ ಸರಕಾರಿ ಸೇವೆಯನ್ನು ತಕ್ಷಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಬಿಸಲು ಒತ್ತಾಯಿಸಿ ನಗರದ ಮಿನಿ ವಿಧಾನ ಸೌದದ ಎದುರು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ ಖಾಸಗೀ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಂಡಿರುವ ಕರ್ನಾಟಕ ರಾಜ್ಯ ಸರಕಾರದ ನಡೆಯನ್ನು ಕಟುವಾಗಿ ಟೀಕಿಸಿದರು. ಇದು ಸರಕಾರಿ ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಕತ್ತು ಹಿಸುಕಿ ಸಾಯಿಸಿ ಖಾಸಗೀ ಆಸ್ಪತ್ರೆಗಳಿಗೆ ಲಾಭಿ ಮಾಡಿಕೊಡುವ ಉದ್ದೇಶ ಈ ತೀರ್ಮಾನದ ಹಿಂದೆ ಅಡಗಿದೆ ಎಂದು ಆರೋಪಿಸಿದರು.
ಆರೋಗ್ಯ ಇಲಾಖೆ ಈ ಒಪ್ಪಂದವನ್ನು ಕೂಡಲೇ ರದ್ದುಗೊಳಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಬಡಿಸಲು ಈ ಕೂಡಲೇ ಕ್ರಮಕೈಗೊಳ್ಳಬೇಕೆಂದು
ಸಿಪಿಎಂ ಪಕ್ಷ ಕಳೆದ ಹಲವಾರು ವರುಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗೀ ಆಸ್ಪತ್ರೆಗಳನ್ನು ನಿಯಂತ್ರಿಸಲು, ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ,ಸಮುದಾಯ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳನ್ನು ಸ್ಥಾಪಿಸಿ ,ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಿಸಬೇಕೆಂದು ಒತ್ತಾಯಿಸುವ ಚಳುವಳಿ ರೂಪಿಸಿ ಎಚ್ಚರಿಸುತ್ತಾ ಬಂದರೂ ಈ ಬಗ್ಗೆ ಯಾವುದೇ ರೀತಿಯ ಕ್ರಮಕೈಗೊಳ್ಳುವಲ್ಲಿ ನಮ್ಮನ್ನಾಳುವ ಸರಕಾರಗಳು ವಿಫಲವಾಗಿದೆ. ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪಕ್ಷದ ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಸದ್ಯ ಜಿಲ್ಲೆಯ ಜನ ಸರಕಾರದ ಮುಂದೆ ಪ್ರಬಲವಾದ ಬೇಡಿಕೆ ಇಟ್ಟಿರೋದು ದ.ಕ. ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಸಂಶೋಧನ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ( ಕ್ಯಾನ್ಸರ್ ಆಸ್ಪತ್ರೆ ) ಕೇಂದ್ರ ಕೂಡಲೇ ಪ್ರಾರಂಬಿಸಬೇಕು. ಅಂತಹ ಬೇಡಿಗಳನ್ನು ಪರಿಗಣಿಸುವುದನ್ನು ಬಿಟ್ಟು ಇರುವ ಸರಕಾರಿ, ಆರೋಗ್ಯ ಕೇಂದ್ರ, ಸಮುದಾಯ ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳ ಹಿಡಿತಕ್ಕೆ ವಹಿಸಿಕೊಡುವ ಒಪ್ಪಂದವನ್ನಲ್ಲ ಎಂದರು.
ಜಿಲ್ಲಾ ಸಮಿತಿ ಸದಸ್ಯರಾದ ಸಂತೋಷ್ ಬಜಾಲ್ ಮಾತನಾಡುತ್ತಾ
ಸರಕಾರ, ಆರೋಗ್ಯ ಇಲಾಖೆ ಈ ಕೂಡಲೇ ಸರಕಾರಿ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳ ಹಿಡಿತಕ್ಕೆ ವಹಿಸಿಕೊಡುವ ಕರಾರು ಒಪ್ಪಂದವನ್ನು ರದ್ದುಗೊಳಿಸಬೇಕು ಹಾಗೂ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಮತ್ತು ಜಯದೇವ, ಕಿದ್ವಾಯಿ, ನಿಮಾನ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲು ಮುಂದಾಗಬೇಕೆಂದು ಸರಕಾರ ಈ ಕೂಡಲೇ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.


ಧರಣಿಯನ್ನು ಉದ್ದೇಶಿಸಿ ಪಕ್ಷದ ಮಾಜಿ ಕಾರ್ಯದರ್ಶಿ ಮಂಡಲಿ ಸದಸ್ಯರಾದ ಜೆ ಬಾಲಕೃಷ್ಣ ಶೆಟ್ಟಿ, ಜಯಂತಿ ಬಿ ಶೆಟ್ಟಿ , ಬಿ.ಕೆ ಇಮ್ತಿಯಾಜ್ , ಪ್ರಮೀಳಾ ಶಕ್ತಿನಗರ, ಶ್ರೀನಾಥ್ ಕಾಟಿಪಳ್ಳ, ದಯಾನಂದ ಶೆಟ್ಟಿ ,ಅಬ್ದುಲ್ ತಯ್ಯೂಬ್, ಮಾತನಾಡಿದರು.
ಧರಣಿಯ ನೇತೃತ್ವವನ್ನು ಜಯಲಕ್ಷ್ಮಿ ಜಪ್ಪಿನಮೊಗರು, ಶಶಿಧರ್ ಶಕ್ತಿನಗರ್,ದಿನೇಶ್ ಶೆಟ್ಟಿ , ದೀಪಕ್ ಬಜಾಲ್ , ನಾಗೇಶ್ ಕೋಟ್ಯಾನ್, ಭಾರತಿ ಬೋಳಾರ್, ರವಿಚಂದ್ರ ಕೊಂಚಾಡಿ, ಆಶಾ ಬೋಳೂರ್, ಕೃಷ್ಣ ತಣ್ಣೀರುಬಾವಿ, ಮನೋಜ್ ಉರ್ವಸ್ಟೋರ್ , ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು