ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆ: ಇಂದು ಕೆಲವು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ
04/07/2023, 11:23
ಮಂಗಳೂರು(reporterkarnataks): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ,ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ನಿನ್ನೆಯ ಮಳೆಗೆ ಮಂಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಪಂಪ್ ವೆಲ್ ಓವರ್ ಫ್ಲೈ ತಳಭಾಗದ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆ ಉಂಟಾಗಿತ್ತು. ಇಡೀ ನಗರದಲ್ಲಿ ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.