ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ವಾಪಸ್: ಮಂಗಳೂರಿನಲ್ಲಿ ಇಂದಿನಿಂದ ಎಲ್ಲವೂ ಸರಾಗ
08/08/2022, 11:29

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯಹಿನ್ನೆಲೆಯಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಹಾಗೂ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಸೋಮವಾರದಿಂದ ಎಲ್ಲ ಅಂಗಡಿ, ವ್ಯವಹಾರ, ಮದ್ಯದಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಈ ಕುರಿತು ಮಾಹಿತಿ ನೀಡಿದ್ದಾರೆ.
ರಾತ್ರಿ ವೇಳೆ ಅಂಗಡಿಗಳು, ವಾಹನಗಳ ಸಂಚಾರಕ್ಕೆ ಹೇರಿದ್ದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಆ. 14 ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಮುಂದುವರೆಯಲಿದೆ. ಅದುವರೆಗೆ ಐದು ಜನರಿಗಿಂತ ಹೆಚ್ಚು ಸಂಖ್ಯೆಯಲ್ಲಿ ಜನರು ಗುಂಪುಗೂಡುವಂತಿಲ್ಲ. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.