ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯಿತಿ ಲಾಕ್ ಡೌನ್ : ಹಾಗಾದರೆ ಯಾವೆಲ್ಲ ಗ್ರಾಪಂ? ಓದಿ ನೋಡಿ
14/06/2021, 07:58
ಮಂಗಳೂರು(reporterkarnataka news): ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಲ್ಲಿ ಲಾಕ್ ಡೌನ್ ಹೇರಲಾಗಿದೆ. ಜೂನ್ 14ರಿಂದ 21ರ ವರೆಗೆ ಇದು ಜಾರಿಯಲ್ಲಿರುತ್ತದೆ.
ಮಂಗಳೂರು ತಾಲೂಕಿನ ನೀರುಮಾರ್ಗ, ಕೊಣಾಜೆ ಗ್ರಾಮ ಪಂಚಾಯಿತಿ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ, ಚಾರ್ಮಾಡಿ ಗ್ರಾಮ ಪಂಚಾಯಿತಿ, ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು ಗ್ರಾಮ ಪಂಚಾಯಿತಿ ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಹಾಗೂ ಸವಣೂರು ಗ್ರಾಮ ಪಂಚಾಯಿತಿಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಮಾಡಿದ್ದಾರೆ.