6:45 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ದ.ಕ., ಉಡುಪಿ: ಪಡಿತರ ಅಂಗಡಿಯಲ್ಲಿ ಇನ್ನು ಸಿಗಲಿದೆ ಸ್ಥಳೀಯ ಕುಚ್ಚಲಕ್ಕಿ; ಕೇಂದ್ರ ಸರಕಾರ ನೀಡಿದೆ ಅನುಮೋದನೆ

07/01/2022, 22:46

ಮಂಗಳೂರು(reporterkarnataka.com)

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಯತ್ನದಿಂದ ಕರ್ನಾಟಕ ಸರ್ಕಾರ ಸದರಿ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ  ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಸದರಿ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ದಿನಾಂಕ. 06.01.22ರಂದು ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಪತ್ರ ಬರೆದು, ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ-ದಕ್ಷಿಣ ಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು