4:48 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ: ಕುದ್ರೋಳಿಯಿಂದ ಬೃಹತ್ ಮೆರವಣಿಗೆ

03/04/2024, 16:07

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಕುದ್ರೋಳಿಯಲ್ಲಿ ಚಾಲನೆ ನೀಡಿದರು.

ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪ್ರದೇಶ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೊ, ರಕ್ಷಿತ್ ಶಿವರಾಂ ಸೇರಿದಂತೆ ಇನ್ನೂ ಅನೇಕ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು