ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಸಹಿತ ದೇಶದ ಹಲವೆಡೆ ಎನ್‌ಐಎ ದಾಳಿ: ಪಿಎಫ್ ಐ ವಿರುದ್ಧ ಕಾರ್ಯಾಚರಣೆ; ದಾಖಲೆಗಳ ಪರಿಶೀಲನೆ
13/08/2023, 20:49
ಬೆಂಗಳೂರು(reporterkarnataka.com): ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಿಗೆ ಭಾನುವಾರ ರಾಷ್ಟ್ರೀಯ ತನಿಖಾ ದಳ
(ಎನ್‌ಐಎ) ದಾಳಿ ನಡೆಸಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಹಲವೆಡೆ ದಾಳಿ ನಡೆಸಲಾಗಿದೆ.
ಎನ್ಐಎ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಮನೆಗಳಿಗೆ ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ವಿರುದ್ಧ ಇರುವ ಆರೋಪದ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದೆ.
ಕೇರಳದ ಕಣ್ಣೂರು ಮತ್ತು ಮಲಪ್ಪುರಂ, ಮಹಾರಾಷ್ಟ್ರದ ನಾಸಿಕ್, ಕೊಲ್ಹಾಪುರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಬಿಹಾರದ ಕತಿಹಾರ್‌ನಲ್ಲಿ ದಾಳಿ ನಡೆಸಲಾಗಿದೆ. ವಿವಿಧಡೆ ನಡೆಸಿದ ದಾಳಿ ವೇಳೆ ಹಲವಾರು ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿ ಕೊಳ್ಳಲಾಗಿದೆ.