5:46 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಸಹಿತ ದೇಶದ ಹಲವೆಡೆ ಎನ್‌ಐಎ ದಾಳಿ: ಪಿಎಫ್ ಐ ವಿರುದ್ಧ ಕಾರ್ಯಾಚರಣೆ; ದಾಖಲೆಗಳ ಪರಿಶೀಲನೆ

13/08/2023, 20:49

ಬೆಂಗಳೂರು(reporterkarnataka.com): ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಿಗೆ ಭಾನುವಾರ ರಾಷ್ಟ್ರೀಯ ತನಿಖಾ ದಳ
(ಎನ್‌ಐಎ) ದಾಳಿ ನಡೆಸಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಹಲವೆಡೆ ದಾಳಿ ನಡೆಸಲಾಗಿದೆ.
ಎನ್ಐಎ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಮನೆಗಳಿಗೆ ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ವಿರುದ್ಧ ಇರುವ ಆರೋಪದ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದೆ.
ಕೇರಳದ ಕಣ್ಣೂರು ಮತ್ತು ಮಲಪ್ಪುರಂ, ಮಹಾರಾಷ್ಟ್ರದ ನಾಸಿಕ್, ಕೊಲ್ಹಾಪುರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಬಿಹಾರದ ಕತಿಹಾರ್‌ನಲ್ಲಿ ದಾಳಿ ನಡೆಸಲಾಗಿದೆ. ವಿವಿಧಡೆ ನಡೆಸಿದ ದಾಳಿ ವೇಳೆ ಹಲವಾರು ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿ ಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು