ಇತ್ತೀಚಿನ ಸುದ್ದಿ
ದಲಿತ ವಿದ್ಯಾರ್ಥಿನಿ, ಪೋಷಕರ ಮೇಲೆ ಹಲ್ಲೆ: ಆರೋಪಿಗಳ ಗಡಿಪಾರಿಗೆ ಭಾರತೀಯರ ಸೇವಾ ಸಮಿತಿ ಒತ್ತಾಯ
16/09/2021, 08:35
ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಭಾರತೀಯರ ಸೇವಾ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಡಾ.ಎಚ್.ಎಂ.ರಾಮಚಂದ್ರ ( ಹೂಡಿ ಚಿನ್ನಿ ) ಹಾಗೂ ಜೆಡಿಎಸ್ ರಾಜ್ಯ ವಕ್ತಾರರ ಅಮರ್ ಚಿಂತಾಮಣಿ ಹಾಗೂ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಶ್ರೀನಿವಾಸಪು ತಹಶೀಲ್ದಾರ್ ರವರಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ.
ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಖಂಡನೀಯ. ಈ ಘಟನೆಯಿಂದ ಪೋಷಕರು ಹೆಣ್ಣುಮಕ್ಕಳನ್ನು ಶಾಲಾ , ಕಾಲೇಜಿಗೆ ಕಳುಹಿಸಲು ಹೆದರುವಂತಾಗಿದೆ ಎಂದು ತಹಶೀಲ್ದಾರ್‌ಗೆ ನೀಡಿದ ಮನವಿ ಪತ್ರದಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಗಡಿಪಾರು ಮಾಡಬೇಕು. ಸಂಬಂಧಪಟ್ಟ ಅಧಿಕಾರಿಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆಯಾ ಪ್ರದೇಶದ ಸಬ್ ಇನ್ಸ್‌ಪೆಕ್ಟರ್ ರವರು ಶಾಲಾ , ಕಾಲೇಜುಗಳಲ್ಲಿ ಕುಂದುಕೊರತೆ ವಿಚಾರಣಾ ಸಭೆ ನಡೆಸಬೇಕು. ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಆಗಿಂದಾಗ್ಗೆ ಬಗೆಹರಿಸಬೇಕು ಎಂದು ಒತ್ತಾಯಿಸಿ , ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ನೀಡಲಾಯಿತು .
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಸಂತೋಷ್ ಕುಮಾರ್ , ವಿ.ಶ್ರೀನಿವಾಸ್ , ವೆಂಕಟೇಶಪ್ಪ , ಪೂಜೇಶ್ , ವೆಂಕಟಸ್ವಾಮಿ , ಪ್ರಶಾಂತ್ , ವರದರಾಜ್ , ಮುನಿಯಪ್ಪ , ಪ್ರಭಾಕರ್ , ಶೈಲಜಾ , ಗುರುಮೂರ್ತಿ , ಮುರಳಿ , ನಾರಾಯಣಸ್ವಾಮಿ , ಮಂಜುಳ , ಮುನಿಯಪ್ಪ , ಅಶ್ವಥ್ , ಕೃಷ್ಣಪ್ಪ ಚಿಂತಾಮಣಿ , ಲಕ್ಷ್ಮೀ ಇನ್ನು ಮುಂತಾದವರು ಉಪಸ್ಥಿತರಿದ್ದರು.