4:19 AM Monday16 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ದಲಿತರ ಶೌಚಾಲಯ, ಸ್ನಾನಗೃಹ ಕಟ್ಟಡ ಸ್ಥಳ ಬದಲಾವಣೆಗೆ ಸಚಿವ ಅಂಗಾರ ಕಾರಣ: ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪ

16/07/2022, 17:52

ಸುಳ್ಯ(reporterkarnataka.com): ಇಲ್ಲಿನ ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ದಲಿತ ಕಾಲೋನಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡ ನಿರ್ಮಿಸಲು 30 ಲಕ್ಷ ಅನುದಾನ ಬಂದಿದ್ದು, ಬಂದಿರುವಂತ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕಾಲೋನಿ ಬಿಟ್ಟು ಸುಮಾರು ದೂರವಿರುವಂತ ಹಿಂದೂ ರುದ್ರಭೂಮಿಯೊಳಗಡೆ ಕಟ್ಟಡ ನಿರ್ಮಾಣ ಮಾಡಿ ಗೇಟಿಗೆ ಬೀಗ ಹಾಕಿರುತ್ತಾರೆ.

ಈ ಘಟನೆಗೆ ಸುಳ್ಯ ಶಾಸಕ ಹಾಗೂ ಸಚಿವ ಅಂಗಾರ ರವರು ಕಾರಣರಾಗಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪಿಸಿದೆ.

ಶೀಘ್ರದಲ್ಲಿ ಅದೇ 30 ಲಕ್ಷ ರೂಪಾಯಿ ಅನುದಾನದ ನೂತನ ಶೌಚಾಲಯ ಮತ್ತು ಸ್ನಾನ ಗೃಹ ಕಟ್ಟಡವನ್ನು ಕುಡಿಯಾಲ ಬೈಲು ದಲಿತ ಕಾಲೋನಿಯಲ್ಲಿ ನಿರ್ಮಿಸಿಕೊಡಬೇಕು, ಇಲ್ಲದಿದ್ದಲ್ಲಿ ಬಿಜೆಪಿ ಕಚೇರಿಯ ಮುಂಬಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು  ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಳಬೈಲು ದಲಿತ ಕಾಲೋನಿಯಲ್ಲಿ ನಿರ್ಮಿಸಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಕಳೆದ ಒಂದು ತಿಂಗಳ ಮೊದಲು ಸುಳ್ಯ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸುಳ್ಯ ತಾಲೂಕು ಪಂಚಾಯಿತ್ ಕಾರ್ಯ ನಿರ್ವಹಣಾಧಿಕಾರಿ ಅವರು ಬಂದು ಜಿಲ್ಲಾ ಪಂಚಾಯಿತಿಗೆ ರಿಪೋರ್ಟ್ ಮಾಡಿದ್ದೇನೆ. ಅದು ಬಂದ ನಂತರ ನಿಮಗೆ ತಿಳಿಸುತ್ತೇನೆ. ಅದರ ನಂತರ ವಿಚಾರಣೆ ಮಾಡೋಣ ಈಗ ಈ ಪ್ರತಿಭಟನೆ ಕೈಬಿಡಿ ಎಂದು ಹೇಳಿದಾಗ ಪ್ರತಿಭಟನೆಯನ್ನು ತಕ್ಕಮಟ್ಟಿಗೆ ಕೈ ಬಿಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು