12:14 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್ ಆದೇಶದಂತೆ ಆರೋಪಿ ಬಂಧನ

29/11/2021, 19:14

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ವೃತ್ತಿಯಲ್ಲಿರುವ ಉಡುಪಿ ಮೂಲದ ದಂಪತಿ ವಾರಾಂತ್ಯದಲ್ಲಿ ತಮ್ಮ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದಾಗ, ಸುರತ್ಕಲ್ ಮುಕ್ಕದಲ್ಲಿ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ಅನಧಿಕೃತ ಟೋಲ್ ಗೇಟ್ ನಲ್ಲಿ ಸಿಬ್ಬಂದಿಯೋರ್ವ ತೀರಾ ಅನುಚಿತ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 

ನವೆಂಬರ್ 27ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ನಡೆದ ವೇಳೆ ಸಹಾಯಕ್ಕಾಗಿ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದರು. ಆ ಸಂದರ್ಭದಲ್ಲಿ ‘ಘಟನಾ ಸ್ಥಳಕ್ಕೆ ಕಳುಹಿಸಲು ತಮ್ಮಲ್ಲಿ ವಾಹನವಿಲ್ಲ’ ವೆಂದು ಠಾಣೆಯಿಂದ ಸಬೂಬು ನೀಡಲಾಗಿತ್ತು. ಹೈವೇ ಗಸ್ತು ವಾಹನವನ್ನೂ ಕಳುಹಿಸದೆ ಪೊಲೀಸರು ಕೈಚೆಲ್ಲಿದ್ದರು. ದಾರಿ ಕಾಣದೆ ದಂಪತಿ ತೀವ್ರವಾಗಿ ನೊಂದು ಕೊನೆಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ನೇರ ಕರೆ ಮಾಡಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೋಲೀಸ್ ಕಮಿಷನರ್ ಶಶಿಕುಮಾರ್ ಅವರು 
ಆರೋಪಿಯನ್ನು ಬಂಧಿಸಲು ಅದೇ ಸುರತ್ಕಲ್ ಠಾಣೆಯ ಇನ್ಸ್ಪೆಕ್ಟರ್ ಸಹಿತವಾಗಿ ಸಿಬ್ಬಂದಿಗಳನ್ನು 10 ನಿಮಿಷದಲ್ಲಿ ಕಳುಹಿಸಿದ್ದಾರೆ. ದುರ್ವರ್ತನೆ ತೋರಿದ್ದ ಟೋಲ್ ಸಿಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು