10:58 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

ಇತ್ತೀಚಿನ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಗೆ ಲಕ್ಷದೀಪೋತ್ಸವ ಸಂಭ್ರಮ: ನೆರೆದ ಭಕ್ತ ಸಾಗರ; 29ರಂದು ಸರ್ವಧರ್ಮ ಸಮ್ಮೇಳನ

27/11/2024, 20:49

ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯ ಮಂಗಳಪರ್ವದಲ್ಲಿ ಸಂಭ್ರಮ- ಸಡಗರ, ಭಯ-ಭಕ್ತಿಯಿಂದ ಆರಂಭಗೊಂಡಿದೆ.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದೆ.


*ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತರ ದಂಡು:* ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ 25 ಸಾವಿರಕ್ಕೂ ಅಧಿಕ ಭಕ್ತರು ಪಾದಯಾತ್ರೆಯಲ್ಲಿ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಮುಂತಾದವರು ನೇತೃತ್ವ ವಹಿಸಿದ್ದರು.
*ಕಾರ್ಯಕ್ರಮಗಳ ವಿವರ ಹೀಗಿದೆ:* ಲಲಿತಕಲಾ ಗೋಷ್ಠಿ – ನ. 28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5-30 ರಿಂದ ನಾಗಸ್ವರ ವಾದನ, 7ರಿಂದ ಸಾತ್ವಿಕ ಸಂಗೀತ, 8ರಿಂದ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.
*ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ:* ನ.29ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಉದ್ಘಾಟಿಸುವರು. ಬೆಂಗಳೂರಿನ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಸಂಶೋಧಕ ಡಾ.ಜಿ.ಬಿ.ಹರೀಶ, ನಿವೃತ್ತ ಉಪನ್ಯಾಸಕ ಡಾ.ಜೋಸೆಫ್ ಎನ್.ಎಂ., ಶಿಕ್ಷಕ ಮೆಹತಾಬ ಇಬ್ರಾಹಿಮ್ ಸಾಬ ಕಾಗವಾಡ ಅವರಿಂದ ಉಪನ್ಯಾಸ ನಡೆಯಲಿದೆ. ರಾತ್ರಿ 8-30 ರಿಂದ ಭರತನಾಟ್ಯ ಕಾರ್ಯಕ್ರಮ ಇರಲಿದೆ.
ನ.30ರಂದು ಸಂಜೆ 5 ಗಂಟೆಯಿಂದ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನನೀ ಡಾ.ರಾ.ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್ ಮೈಸೂರು, ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ಬಳಿಕ ರಾತ್ರಿ 8-30ರಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮವಿದೆ. ನಿತ್ಯ ಸಂಜೆ 6-30 ರಿಂದ ರಾತ್ರಿ 11ರ ವರೆಗೆ ವಸ್ತುಪ್ರದರ್ಶನ ಮಂಟಪದಲ್ಲಿ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ – ಸಂಗೀತ ಹಬ್ಬವೇ ನಡೆಯಲಿದೆ.
*ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ:* ನ.26ರಿಂದ ಡಿ.1ರವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದೆ. ನ.26ರಂದು ಬೆಳಗ್ಗೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ ಸಂಬಂಧಿಸಿದ 300ಕ್ಕೂ ಹೆಚ್ಚು ಮಳಿಗೆಗಳಿರಲಿವೆ.
*ಲಕ್ಷದೀಪೋತ್ಸವ ಉತ್ಸವಗಳು:*
ನ.27: ಕೆರೆ ಕಟ್ಟೆ ಉತ್ಸವ
ನ.28: ಲಲಿತೋದ್ಯಾನ ಉತ್ಸವ
ನ.29: ಕಂಚಿಮಾರು ಕಟ್ಟೆ ಉತ್ಸವ
ನ.30: ಗೌರಿಮಾರು ಕಟ್ಟೆ ಉತ್ಸವ
ಡಿ.1: ಸಮವಸರಣ ಪೂಜೆ – ಸಂಜೆ 6-30ರಿಂದ ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ.
ಜಿನಗಾನೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು