1:34 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡಗೆ ಮತ್ತೆ ಜೈಲು, ಶರಣಾಗುವಂತೆ ಆದೇಶ

14/08/2025, 14:08

ನವದೆಹಲಿ(reporterkarnataka.com): ಕನ್ನಡ ಚಲನಚಿತ್ರ ನಟ ಹಾಗೂ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ.
ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು