5:15 AM Saturday5 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು