4:26 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು