ಇತ್ತೀಚಿನ ಸುದ್ದಿ
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ
04/12/2024, 23:35
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ವಿಶ್ವ ಹಿಂದೂ ಪರಿಷದ್, ಬಜರಂಗ ದಳದ ನೇತೃತ್ವದಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಪ್ರವೇಶಕ್ಕೆ ಪ್ರವಾಸಿಗರಿಗೆ 4 ದಿನ ನಿರ್ಬಂಧ ಹೇರಲಾಗಿದೆ.
ಡಿಸೆಂಬರ್ 11ರಿಂದ 14 ವರೆಗೆ ನಾಲ್ಕು ದಿನ ಪಶ್ಚಿಮ ಘಟ್ಟಗಳ ಸಾಲು ಬಂದ್ ಆಗಲಿವೆ. 4 ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಡಿಸೆಂಬರ್ 15 ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.