ಇತ್ತೀಚಿನ ಸುದ್ದಿ
ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್: 6 ಮಂದಿ ಗಂಭೀರ
28/04/2024, 18:38
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ದತ್ತಪೀಠ ಬಳಿ ಪ್ರವಾಸಿಗರ ಮಿನಿ ಬಸ್ಸೊಂದು 100 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿದ್ದು, ಇತರ 23 ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಈ ಪ್ರವಾಸಿಗರು ಬಂದಿದ್ದರು.
ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.