ಇತ್ತೀಚಿನ ಸುದ್ದಿ
ದತ್ತಪೀಠದ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಶೃಂಗೇರಿ ಶಾಸಕರ ವಿರುದ್ಧ ಬಜರಂಗ ದಳ ಪ್ರತಿಭಟನೆ
25/01/2023, 09:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.ಕಾಂ
ದತ್ತಪೀಠ ಮತ್ತು ಆಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಬಜರಂಗದಳ ವತಿಯಿಂದ ಎನ್.ಆರ್.ಪುರ ತಾಲೂಕಿನ ಖಾಂಡ್ಯದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಬಜರಂಗದಳದ ಕಾರ್ಯಕರ್ತರು ಶಾಸಕ ರಾಜೇಗೌಡರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಭಜರಂಗದಳ ಕಾರ್ಯಕರ್ತರು ಭಾಗವಹಿಸಿದ್ದರು.
ಶಾಸಕರು ೨೪ ಗಂಟೆಯೊಳಗೆ ಕ್ಷಮೆಯಾಚಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ನಾಳೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿಭಟನೆಗೆ ಬಜರಂಗದಳ ಕರೆ ನೀಡಿದೆ.