4:49 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

16/06/2025, 21:07

*ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ- ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿ.ಎಂ ಸಿದ್ದರಾಮಯ್ಯ

*56 ಇಂಚಿನ ಎದೆ useless ಆಗಿದೆ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ: ಪ್ರಧಾನಿಯನ್ನು ಅಣಕಿಸಿ ಬಿಜೆಪಿ ಸುಳ್ಳು ಟೀಕಿಸಿದ ಸಿಎಂ*

ದಾವಣಗೆರೆ(reporterkarnataka.com): ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
56 ಇಂಚಿನ ಎದೆಯ ಪ್ರಧಾನಿ ಮೋದಿಯವರು ಯೂಸ್ ಲೆಸ್ ಆಗಿದ್ದಾರೆ.‌ ಎದೆ ಎಷ್ಟು ಇಂಚು ಎನ್ನುವುದು ಮುಖ್ಯವಲ್ಲ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲವಾಗಿದೆ ಎಂದು ಟೀಕಿಸಿದರು.
ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ 1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.
ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.
ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದು ಅವರು ನುಡಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1892 ಮನೆಗಳನ್ನು ವಿತರಿಸಿದ್ದೇವೆ ಎಂದರು.
ಸಮಾಜದ ಎಲ್ಲಾ ಜಾತಿ, ವರ್ಗ ಮತ್ತು ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಾವು ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿಗೊಳಿಸುತ್ತಾ ಸಮ ಸಮಾಜದ ಆಶಯವನ್ನು ಈಡೇರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಮೋದಿಯವರ ಅಚ್ಚೇ ದಿನ್ ಆಯೆಗಾ ಬರೀ ಡೈಲಾಗ್. ಯಾರ ಕಣ್ಣಿಗಾದರೂ ಅಚ್ಚೆ ದಿನ ಕಂಡಿದೆಯಾ ? ಮೋದಿ ಪ್ರಧಾನಿ ಆಗುವ ಮೊದಲು ಪೆಟ್ರೋಲ್, ಡೀಸೆಲ್, ಚಿನ್ನ, ರಸಗೊಬ್ಬರ ಬೆಲೆ ಎಷ್ಟಿತ್ತು. ಈಗ ಎಷ್ಟಿದೆ ಮೋದಿಯವರೇ ಎಂದು ಪ್ರಶ್ನಿಸಿದ ಸಿಎಂ, ಬೆಲೆ ಏರಿಕೆಯ ಕಾರಣಕರ್ತ ಪ್ರಧಾನಿ ಮೋದಿಯವರೇ ಆಗಿದ್ದಾರೆ ಎಂದರು.


ಹೀಗಾಗಿ ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವ್, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ಕಾಂಗ್ರೆಸ್ ಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ರಾಜ್ಯಕ್ಕೆ 15ನೇ ಹಣಕಾಸು ಆಯೋಗದಲ್ಲೂ ಅನ್ಯಾಯ ಆಯಿತು. 11500 ಕೋಟಿ ರೂಪಾಯಿ 15ನೇ ಆಯೋಗದಿಂದ ಅನ್ಯಾಯವಾಯಿತು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5000 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ನೀಡಲಿಲ್ಲ ಎಂದು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅನ್ಯಾಯಗಳನ್ನು ಪಟ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

*ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ:*
ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

*ಅಶೋಕ್- ವಿಜಯೇಂದ್ರ ಸಾರ್ವಜನಿಕ‌ ಚರ್ಚಗೆ ಬನ್ನಿ:*
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು