4:57 AM Sunday25 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ದಾವಣಗೆರೆ: ಜ.10ರಂದು ಕಲಾಕುಂಚ ಸಂಸ್ಥೆ ವತಿಯಿಂದ ಉರ್ದು ಶಾಲೆಯಲ್ಲಿ ಕನ್ನಡ ನಿತ್ಯೋತ್ಸವ

02/01/2023, 23:25

ದಾವಣಗೆರೆ(reporterkarnataka.com): ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ದಾವಣಗೆರೆಯ ಎಸ್.ಎಸ್.ಎಂ. ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಜನವರಿ 10ರಂದು ಬೆಳಗ್ಗೆ 11
ಗಂಟೆಗೆ ಕನ್ನಡ ನಿತ್ಯೋತ್ಸವ ಹಾಗೂ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಎದುರಿಸುವ ಮಕ್ಕಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರ ನಡೆಯಲಿದೆ ಎಂದು
ಕಲಾಕುಂಚ ಕೆ.ಎಚ್.ಮಂಜುನಾಥ್ ತಿಳಿಸಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ದಾವಣಗೆರೆ ಸಮಾನ ಮನಸ್ಕರ ಸೇವಾ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ಸಾಹೇಬ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉಮಾದೇವಿ ಕೆ. ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ. ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ಕನ್ನಡ ನಾಡು-ನುಡಿ, ಇತಿಹಾಸ, ಪರಂಪರೆ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಎದುರಿಸುವ ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು ತಿಳಿಸಿದ್ದಾರೆ.

ಕನ್ನಡ ನಾಡು, ನುಡಿ ಕಾರ್ಯಕ್ರಮ ನವಂಬರ್‌ಗೆ ಅಷ್ಟೇ ಸೀಮಿತವಾಗದೆ ಕನ್ನಡ ನಿತ್ಯೋತ್ಸವದ ಈ ಅಪರೂಪದ ಕಾರ್ಯಕ್ರಮಕ್ಕೆ
ಎಲ್ಲಾ ಕನ್ನಡ ಮನಸ್ಸುಗಳು ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಲು ಕಲಾಕುಂಚ ಸರ್ವ ಸದಸ್ಯರು, ಪದಾಧಿಕಾರಿಗಳು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು