7:18 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ದಾವಣಗೆರೆ: ಕೆರೆಗೆ ಹಾರಿ ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ; ಪ್ರೀತಿಗೆ ಮನೆಯವರ ವಿರೋಧ?

18/08/2022, 18:18

ದಾವಣಗೆರೆ(reporterkarnataka.com): ಇಲ್ಲಿನ ಬೆಂಕಿಕೆರೆ ಗ್ರಾಮದ ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತಪಟ್ಟ ಪ್ರೇಮಿಗಳನ್ನು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ಗುರುತಿಸಲಾಗಿದೆ.

ಚರಣ್ ಮತ್ತು ನಾಗವೇಣಿ ಅವರು ಆ.17ರಂದು ಬೈಕ್​ನಲ್ಲಿ ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಬಂದಿದ್ದರು. ಚರಣ್ ಬೆಂಗಳೂರಿನಲ್ಲಿ ಇರುವ ತನ್ನ ತಂದೆ ಮತ್ತು ಸ್ನೇಹಿತನಿಗೆ ಫೋನ್ ಮಾಡಿ ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ.

ನಂತರ ಮನೆಯವರು ನೀಡಿದ ಮಾಹಿತಿ ಪ್ರಕಾರ ಪೊಲೀಸರು ಕೆರೆಯ ಬಳಿ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ ಯುವಕನ ಬೈಕ್ ಮತ್ತು ಇಬ್ಬರ ಚಪ್ಪಲಿ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಇವರಿಬ್ಬರ ಪ್ರೀತಿಯನ್ನು ಮನೆಯವರು ವಿರೋಧಿಸಿದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು