4:13 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ದಾವಣಗೆರೆ: ವಿದ್ಯಾರ್ಥಿನಿಯರ ಜತೆ ಉಪನ್ಯಾಸಕ ಮಲ್ಲಿ

15/07/2026, 18:01

ದಾವಣಗೆರೆ(reporterkarnataka.com): ಜಿಲ್ಲೆಯ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಪನ್ಯಾಸಕನೊಬ್ಬ ಕಾಲೇಜು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ವಿದ್ಯಾರ್ಥಿನಿಯರ ಪೋಷಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಎಫ್‌ಐಆರ್ (FIR) ದಾಖಲಾಗಿದೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು, ಇಲಾಖಾ ವಿಚಾರಣೆ ಮುಗಿಯುವವರೆಗೆ ಉಪನ್ಯಾಸಕ ಮಲ್ಲಿಕಾರ್ಜುನನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

*ಬೇಬಿ, ಡಾರ್ಲಿಂಗ್ ನನ್ನ ಇಷ್ಟಪಡ್ತೀಯಾ?*
ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನಲ್ಲಿ ತಮ್ಮ ಮಗಳೊಂದಿಗೆ ಉಪನ್ಯಾಸಕ ನಡೆದುಕೊಂಡ ಕೆಟ್ಟ ವರ್ತನೆಯನ್ನು ಉಲ್ಲೇಖಿಸಿದ್ದಾರೆ. ಉಪನ್ಯಾಸಕ ಮಲ್ಲಿಕಾರ್ಜುನ ಕಾಲೇಜಿನ ಬಾಲಕಿಯರ ಜೊತೆ ನಿರಂತರವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿಷಯವನ್ನು ನನ್ನ ಮಗಳು ನನ್ನ ಬಳಿ ತಿಳಿಸಿದ್ದಳು. ಪಾಠ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದಲ್ಲದೆ, ಬಟ್ಟೆ ಹಿಡಿದು ಎಳೆದಾಡಿ “ಬೇಬಿ, ಡಾರ್ಲಿಂಗ್ ನನ್ನ ಇಷ್ಟಪಡ್ತೀಯಾ?” ಎಂದು ಲೈಂಗಿಕವಾಗಿ ಪೀಡಿಸುತ್ತಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು