2:18 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ…

ಇತ್ತೀಚಿನ ಸುದ್ದಿ

ದಾವಣಗೆರೆ ಧನಿ ಶಾಮನೂರು ಶಿವಶಂಕರಪ್ಪ ನಿಧನ: ಸಿಎಂ ಸಹಿತ ಹಲವು ಗಣ್ಯರ ಸಂತಾಪ; ಇಂದು ಅಂತ್ಯಕ್ರಿಯೆ

15/12/2025, 09:18

ನವದೆಹಲಿ(reporterkarnataka.com): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ, ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶಾಮನೂರ್ ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ದಾವಣಗೆರೆಯಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ ತುಂಬಾ ಆತ್ಮೀಯರಾಗಿದ್ದರು ಅವರ ನಿಧನದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರ್ ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು