2:39 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು