2:19 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌ ಶೋ

23/03/2026, 22:36

ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಪತ್ನಿ ಮತ್ತು ಬಿಜೆಪಿ ಮುಖಂಡರ ಜತೆ ತೆರಳಿ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಳಿಕ ಬೃಹತ್‌ ರೋಡ್‌ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಾಗಿದೆ. ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಸೇರಿ ಹಲವರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ನಗರ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ರೋಡ್‌ ಶೋ ಮಾಡಲಾಯಿತು. ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಎಸ್‌. ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ದಾವಣಗೆರೆ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ಮತ್ತು ಪ್ರಮುಖರು ಭಾಗವಹಿಸಿದ್ದರು.

*ಬಿಜೆಪಿ ಅಭ್ಯರ್ಥಿಗೆ ಜಿ.ಬಿ.ವಿನಯ್‌ಕುಮಾ‌ರ್ ಬೆಂಬಲ*
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ‘ಇನ್‌ಸೈಟ್ಸ್ ಐಎಎಸ್’ ಸಂಸ್ಥಾಪಕ ಹಾಗೂ ‘ಸ್ವಾಭಿಮಾನಿ ಬಳಗ’ದ ಅಧ್ಯಕ್ಷ ಜಿ.ಬಿ.ವಿನಯ್‌ಕುಮಾ‌ರ್ ಬೆಂಬಲ ಘೋಷಿಸಿದ್ದಾರೆ. ಇಂದು ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅವರು, ಆತ್ಮೀಯ ಸ್ನೇಹಿತನ ಪರ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗಲು ನಿರ್ಧರಿಸಿದ್ದಾರೆ.
ನಾನು ಸ್ವತಂತ್ರವಾಗಿ ಸ್ಪರ್ಧಿಸಿದರೆ ಹಿಂದೂಗಳ ಮತಗಳು ವಿಭಜನೆಯಾಗಲಿವೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲವಾಗಲಿದೆ. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಕುಟುಂಬ ರಾಜಕಾರಣದ ವಿರುದ್ದ ನನ್ನ ನಿಲುವು ಗಟ್ಟಿಯಾಗಿದೆ. ಹೀಗಾಗಿ ಯಾವುದೇ ಷರತ್ತುಗಳಿಲ್ಲದೇ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಬೆಂಬಲಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತಿದೆ. ಒಂದೇ ಮನೆಯಲ್ಲಿ ಸಚಿವರು, ಸಂಸದರು ಇದ್ದಾರೆ. ಆದರೂ, ಅದೇ ಕುಟುಂಬದವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಅಧಿಕಾರದ ದಾಹ, ದುರಂಹಕಾರ, ಸರ್ವಾಧಿಕಾರಿ ಧೋರಣೆಗೆ ಮತದಾರರು ಪಾಠ ಕಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು