7:34 PM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

20/03/2026, 19:39

ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಸಿದರು.
ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.ಬಿಜೆಪಿ ಆಕಾಂಕ್ಷಿಗಳಾಗಿದ್ದ ಅಜಯ್ ಕುಮಾರ್, ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಗುರುವಾರ ಬಿಜೆಪಿ ಹೈಕಮಾಂಡ್ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಅಧಿಕೃತವಾಗಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿತ್ತು. ಆ ಬಳಿಕ ಶ್ರೀನಿವಾಸ್ ದಾಸಕರಿಯಪ್ಪರು ಫುಲ್ ಆಕ್ಟೀವ್ ಆಗಿದ್ದು, ಎಲ್ಲೆಡೆ ಸಂಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬಿ ಫಾರಂ ಸಿಗದಿದ್ದರೂ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ನಡುವೆ ಶ್ರೀನಿವಾಸ್ ದಾಸಕರಿಯಪ್ಪರೂ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಸಾದಿಕ್ ಪೈಲ್ವಾನ್ ಅವರು ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ನಿಂದ ಬಿ ಫಾರಂ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶ್ರೀನಿವಾಸ್ ದಾಸಕರಿಯಪ್ಪರಿಗೆ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಬೆಂಬಲ ಇದ್ದು, ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದರು. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ ಕಮಲ ಅರಳಿಸುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು