6:49 PM Thursday9 - April 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್

ಇತ್ತೀಚಿನ ಸುದ್ದಿ

ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

09/04/2026, 18:37

ದಾವಣಗೆರೆ(reporterkarnataka.com): ಮತದಾರರ ಚೀಟಿ ನೀಡಲು ಮತಗಟ್ಟೆ ಸಮೀಪ ಹಾಕಿಕೊಂಡಿದ್ದ ಟೇಬಲ್ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರ ನಡುವೆ ಗುರುವಾರ ಇಲ್ಲಿ ಗಲಾಟೆ ನಡೆಯಿತು.
ನಗರದ ವಾರ್ಡ್ ಸಂಖ್ಯೆ 4 ರ ಮಿಲ್ಲತ್ ಶಿಕ್ಷಣ ಸಂಸ್ಥೆಯಲ್ಲಿ ಆರು ಮತಗಟ್ಟೆ ಇರುವುದರಿಂದ ಮೆಹಬೂಬ್ ನಗರದ ಮುಖ್ಯ ರಸ್ತೆಯ ಆಲಾ ಹಜರತ್‌ ಚೌಕದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಮತದಾರರ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದರು. ರಸ್ತೆಯ ಎರಡು ಬದಿಯಲ್ಲಿ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಟೇಬಲ್ ಹಾಕಿಕೊಂಡಿದ್ದರು. ಇದರಿಂದ ಸ್ಥಳದಲ್ಲಿ ಜನಜಂಗುಳಿ ಉಂಟಾಗಿತ್ತು.

ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಮತದಾರರ ಮನವೊಲಿಸಲು ಕೊನೆಯ ಗಳಿಗೆಯಲ್ಲಿ ಪ್ರಯತ್ನ ಮಾಡುತ್ತಿದರು. ಕುಕ್ಕರ್ ಚಿಹ್ನೆ ಹಾಗೂ 4ನೇ ಸಂಖ್ಯೆಗೆ ಮತ ಹಾಕುವಂತೆ ಎಸ್‌ಡಿಪಿಐ ಕಾರ್ಯಕರ್ತರು ಮನವಿ ಮಾಡುತ್ತಿದ್ದರು. ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು 3ನೇ ಸಂಖ್ಯೆಯ ಹಸ್ತದ ಗುರುತಿಗೆ ಮತ ನೀಡುವಂತೆ ಕೋರಿಕೊಳ್ಳುತ್ತಿದ್ದರು.
ಮುಖ್ಯ ರಸ್ತೆಯಿಂದ ಹಿಂದಕ್ಕೆ ಟೇಬಲ್ ಹಾಕಿಕೊಳ್ಳುವಂತೆ ಕಾಂಗ್ರೆಸ್ ನಾಯಕರು ಎಸ್‌ಡಿಪಿಐ ಮುಖಂಡರಿಗೆ ತಾಕೀತು ಮಾಡಿದರು. ಟೇಬಲ್ ತೆರವುಗೊಳಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಹಾಗೂ ಇತರರು ಒತ್ತಾಯಿಸಿದರು. ಇದಕ್ಕೆ ಒಪ್ಪದೇ ಇದ್ದಾಗ ಕಾಂಗ್ರೆಸ್ ಮುಖಂಡರು ಟೇಬಲ್ ಎತ್ತಿ ಬಿಸಾಡಿದರು. ಆಗ ಎರಡು ಪಕ್ಷಗಳ ಮುಖಂಡರ ನಡುವೆ ವಾಗ್ವಾದ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಜನರನ್ನು ಚದುರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು