7:45 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಡಿಸಿ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ!: ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಬಿಎಸ್ ವೈ, ಮಧುರೆ ಶನಿಮಹಾತ್ಮ ದೇವಸ್ಥಾನಕ್ಕೆ ಡಿಕೆಶಿ ಭೇಟಿ!!

15/08/2021, 14:47

ದೊಡ್ಡಬಳ್ಳಾಪುರ(reporterkarnataka.com): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿರುವ ಆದೇಶಕ್ಕೆ ಕವಡೆ ಕಾಸಿನ ಬೆಲೆ ಇಲ್ಲದಂತಾಗಿದೆ. ಕೊರೊನಾ ಆತಂಕದ ಹಿನ್ನೆಲೆ ವಿಶೇಷ ದಿನಗಳಲ್ಲಿ ದೇವಾಲಯ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರೂ ನಮ್ಮ ನಾಯಕರು ಮಾತ್ರ ಯಾವುದೇ ಎಗ್ಗಿಲ್ಲದೆ ಭೇಟಿ ನೀಡುತ್ತಿದ್ದಾರೆ.

ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು ಮಧುರೆ ಶನಿ ಮಹಾತ್ಮ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ನಿ ಸಮೇತ ದೇವರ ದರ್ಶನ ಪಡೆದರು. 

ಮಧುರೆ ಶನಿಮಹಾತ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಶನಿವಾರ ವಿಶೇಷ ದಿನವಾಗಿದ್ದು, ಸುತ್ತಮುತ್ತಲಿನ ಭಕ್ತರ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬರುತ್ತಾರೆ. ಜನದಟ್ಟನೆಯಿಂದ ಕೊರೊನಾ ಮೂರನೇ ಅಲೆ ಹರಡುವ ಸಾಧ್ಯತೆ ಇದ್ದು ಜಿಲ್ಲಾಧಿಕಾರಿಗಳು ವಿಶೇಷ ದಿನಗಳು ಮತ್ತು ಶ್ರಾವಣ ಮಾಸದ ಶನಿವಾರ ಮತ್ತು ಭಾನುವಾರ ದೇವಸ್ಥಾನದ ಬಾಗಿಲು ಬಂದ್ ಮಾಡುವಂತೆ ಆದೇಶಿಶ ಮಾಡಿದ್ದರು. ಆದರೆ ಜಿಲ್ಲಾಧಿಕಾರಿಗಳ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತೆ ಆಗಿದೆ. ಇಂದು ಬೆಳಿಗ್ಗೆ ಡಿ.ಕೆ. ಶಿವಕುಮಾರ್ ಪತ್ನಿ ಸಮೇತರಾಗಿ ಕ್ಷೇತ್ರಕ್ಕೆ ದೇವರ ದರ್ಶನ ಪಡೆದರು, ಅವರೊಂದಿಗೆ ಪಕ್ಷದ ಮುಖಂಡರು ಮತ್ತು ಅಭಿಮಾನಿಗಳು ಸಹ ದೇವಾಲಯದ ಒಳ ಬಂದು ದೇವರ ದರ್ಶನ ಪಡೆದರು.

ಇನ್ನೂ ಸಾರ್ವಜನಿಕರಿಗೆ ದೇವಸ್ಥಾನ ಪ್ರವೇಶ ನಿರಕಾರಿಸಲಾಗಿದ್ದು, ದೇವಾಲಯ ಬಾಗಿಲು ಬಂದ್ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಭಕ್ತರು ದೇವಾಲಯದ ಬಾಗಿಲಿಗೆ ಪೂಜೆ ಮಾಡುತ್ತಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದು ಸಾಮಾಜಿಕ ಅಂತರ ಮಾಸ್ಕ್ ಧರಿಸದೆ ಸರದಿ ಸಾಲಿನಲ್ಲಿ ನಿಂತು ದೇವಾಲಯ ಬಾಗಿಲಲ್ಲಿಯೇ ಪೂಜೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರಾಜಕೀಯ ಮುಖಂಡರಿಗೆ ಒಂದು ನ್ಯಾಯ ಸಾಮಾನ್ಯ ಜನರಿಗೆ ಒಂದು ನ್ಯಾಯ ಎಂದು ಚರ್ಚೆಯಾಗುತ್ತಿದೆ.

ಕೃಪೆ : ಮಂಜುನಾಥ್ ಟಿಎನ್, 

ಆಲ್ ಇಂಡಿಯನ್ ನ್ಯೂಸ್ ದೊಡ್ಡಬಳ್ಳಾಪುರ

ಇತ್ತೀಚಿನ ಸುದ್ದಿ

ಜಾಹೀರಾತು