ಇತ್ತೀಚಿನ ಸುದ್ದಿ
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ
20/04/2025, 12:18

ಧರ್ಮಸ್ಥಳ(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲಕ್ಕೆ ಭಾನುವಾರ ತೆರಳಿ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು. ಡಿಸಿಎಂ ಶಿವಕುಮಾರ್ ಅವರು ಬೆಂಗಳೂರಿನಿಂದ ಶನಿವಾರ ರಾತ್ರಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಶಿವಕುಮಾರ್ ಅವರು ಸರಕಾರಿ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.