1:25 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸ್ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ವಿರುದ್ಧ ಡಿಸಿಆರ್‌ಇ ಎಸ್ಪಿ ದೂರು

21/04/2026, 14:14

ಮಂಗಳೂರು (reporterkarnataka.com): ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಹಾಗೂ ಕೆಲ ಐಪಿಎಸ್‌ ಅಧಿಕಾರಿಗಳು ತಮ್ಮ ಕೆಳ ಹಂತದ ಅಧಿಕಾರಿ-ಸಿಬ್ಬಂದಿ ವಿರುದ್ಧ ದೌರ್ಜನ್ಯ ಎಸಗುತ್ತಿದ್ದು, ಇದನ್ನು ಬಹಿರಂಗಪಡಿಸಲು ಅನುಮತಿ ನೀಡುವಂತೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಬೆಂಗಳೂರು ನಗರ ವಲಯದ ಎಸ್ಪಿ ಎಸ್‌.ಎಸ್‌.ಕಾಶಿ ರಾಜ್ಯ ಪೊಲೀಸ್‌ ಮಹಾನಿರ್ದೇರ್ಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೆಲವು ಐಪಿಎಸ್‌ ಅಧಿಕಾರಿಗಳು ಕೆಳಹಂತದ ಅಧಿಕಾರಿಗಳು, ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ ತೋರುತ್ತಿದ್ದಾರೆ. ಬೇರೆ ರಾಜ್ಯಗಳಿಂದ ಬಂದವರು ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸುಧೀರ್ ಕುಮಾರ್ ರೆಡ್ಡಿ ಅವರ ಕರ್ಮಕಾಂಡ, ದೌರ್ಜನ್ಯ, ಇತರೆ ಕೆಲ ಐಪಿಎಸ್‌ ಅಧಿಕಾರಿಗಳ ಕರ್ಮಕಾಂಡ ತೆರೆದಿಡುತ್ತೇನೆ. ಹೀಗಾಗಿ ಮುಖ್ಯಮಂತ್ರಿ, ಗೃಹ ಸಚಿವರು, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ತಮ್ಮ ಸಮಕ್ಷಮದಲ್ಲಿ ನನಗೆ ಏ.18ರಿಂದ ಏ.29ರೊಳಗೆ ದಿನಾಂಕ ನಿಗದಿ ಮಾಡಿ, 30 ನಿಮಿಷ ಕಾಲಾವಕಾಶ ಕೊಡಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದೇ ತಿಂಗಳ ಅಂತ್ಯದಲ್ಲಿ ಕಾಶಿ ಅವರು ನಿವೃತ್ತಿ ಹೊಂದುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು