6:05 PM Thursday31 - July 2025
ಬ್ರೇಕಿಂಗ್ ನ್ಯೂಸ್
ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಸಿಕ್ಕಿದ್ದು ಬರೇ ಮೂಳೆ ಚೂರುಗಳಲ್ಲ; ಹಾಗಾದರೆ ಮತ್ತೇನು?

31/07/2025, 17:43

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಮಾನವ ಮೂಳೆ ಚೂರುಗಳು ಮಾತ್ರವಲ್ಲದೆ ತಲೆ ಬುರುಡೆಯ ಅವಶೇಷಗಳೂ ಪತ್ತೆಯಾಗಿವೆ ಎಂದು ವಿಶ್ವಸನೀಯ ಮೂಲಗಳು ದೃಢಪಡಿಸಿವೆ.
ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಲಾದ 6ನೇ ಸ್ಪಾಟ್ ನಲ್ಲಿ ನಡೆಸಲಾದ
ಸಮಾಧಿ ಅಗೆತ ಸಂದರ್ಭದಲ್ಲಿ ಮಾನವ ಮೂಳೆ ತುಂಡುಗಳು ಮಾತ್ರವಲ್ಲದೆ ತಲೆ ಬುರುಡೆ ಚೂರುಗಳು, ಕೈಕಾಲಿನ ಅವಶೇಷಗಳು ಎಂದು ತಿಳಿದು ಬಂದಿದೆ.
ಈ ನಡುವೆ ಎಸ್ಐಟಿ ದ.ಕ. ಜಿಲ್ಲೆಯಲ್ಲಿ ನಾಪತ್ತೆಯಾದವರ ಬಗ್ಗೆ ವಿವರ ನೀಡುವಂತೆ ಪ್ರತಿ ಪೊಲೀಸ್ ಠಾಣೆಗೆ ಸೂಚಿಸಿದೆ. ಕಳೆದ 20 ವರ್ಷಗಳಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿ ಮೂರು ದಿನಗಳಿಂದ ಸಾಕ್ಷ್ಯ ಪತ್ತೆಗಾಗಿ ಎಸ್‌ಐಟಿ ತಂಡ ಕಾರ್ಮಿಕರ ಮೂಲಕ ಅಗೆಯುವ ಕೆಲಸದಲ್ಲಿ ತೊಡಗಿದೆ. ಮೂರು ದಿನಗಳಲ್ಲಿ ಗುರುತು ಹಾಕಿದ ಐದು ಕಡೆ ಅಗೆತ ನಡೆಸಿದಾಗ, ಯಾವುದೇ ಸಾಕ್ಷ್ಯ ಲಭಿಸಿರಲಿಲ್ಲ.
ಇಂದು ಬೆಳಗ್ಗಿನಿಂದ ಆರನೇ ಸಮಾಧಿ ಜಾಗದಲ್ಲಿ ಅಗೆಯಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಅತ್ಯಂತ ಜೋಪಾನವಾಗಿ ಅಗೆಯುವ ಕೆಲಸ ನಡೆಯುವ ಸಾಧ್ಯತೆ ಇದೆ. ಸ್ಥಳದಲ್ಲಿ ಡಿಐಜಿ ಅನುಚೇತ್, ಎಸ್ಪಿ ಜಿತೇಂದ್ರ ದಯಾಮ, ಪುತ್ತೂರು ಎಸಿ ಸ್ಟೆಲ್ಲಾ ಮೇರಿಸ್ ಇದ್ದಾರೆ. ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಅಗೆಯುವ ಕೆಲಸ ಮಾಡಲಾಗುತ್ತಿದ್ದು ಹೆಣ ಹೂತ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು