7:23 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

53 ಲಕ್ಷ ಕೋಟಿ ಇದ್ದ ಸಾಲ ಮೋದಿ ಪ್ರಧಾನಿಯಾದ ಬಳಿಕ 185 ಲಕ್ಷ ಕೋಟಿಗೆ ಏರಿಕೆಯಾಗಿದೆ: ಮಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

10/10/2025, 22:34

ಮಂಗಳೂರು(reporterkarnataka.com): 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.
ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಮಾನ್ಯವಾಗಿ ಪ್ರಾಧನಿಯಾದವರೂ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರು ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಬಿಹಾರ ಚುನಾವಣೆಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ಹಾಕಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್, ಕಾಂಗ್ರೆಸ್ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಭಾಷಣ ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದು ನುಡಿದರು.
ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತರಲಾಗಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಸುರೇಶ್ ಬಳ್ಳಾಲ್, ಪದ್ಮರಾಜ್ ಪೂಜಾರಿ, ಸದಾಶಿವ್ ಉಳ್ಳಾಲ್, ಟಿ.ಎಂ. ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್, ಸೇರಿಂದತೆ ಮುಖಂಡರು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು