8:06 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಡಿ. 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

05/11/2023, 11:56

ರಾಯಚೂರ(reporterkarnataka.com) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿವತಿಯಿಂದ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ
ಡಿಸೆಂಬರ್ 23ರಂದು ನಡೆಯಲಿದೆ‌.

ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲೆಮಠ ಅಂತರಗಂಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ. 23ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. ರಾಜ್ಯ ಅಧ್ಯಕ್ಷರ ಆದೇಶದಂತೆ ನಮ್ಮ ಸಂಘಟನೆಯ ಪತ್ರಕರ್ತರ ಮಿತ್ರರ ಮಕ್ಕಳಿಗೆ ಕೂಡ ಪ್ರಶಸ್ತಿ ನೀಡಲಾಗುತ್ತದೆ. ನಮ್ಮ ಸದಸ್ಯರು ತಮ್ಮ ಮಕ್ಕಳು ಅತಿ ಹೆಚ್ಚು ಅಂಕಗಳನ್ನು ಪಡೆದ ಮಾಹಿತಿಯನ್ನು ನೀಡಿ ಪ್ರಶಸ್ತಿ ಪಡೆಯಲು ಅರ್ಹತೆ ಹೊಂದಿದ್ದಾರೆ. 10 ನೇ ತರಗತಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ ಹೀಗೆ ಇನ್ನಿತರ ವಿಧ್ಯಾರ್ಥಿಗಳು ಇದ್ದ ಪಾಲಕರು ಆಯಾ ತಾಲೂಕಿನ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷ ಅವರನ್ನು ಸಂಪರ್ಕ ಮಾಡಬೇಕು. ಪ್ರತಿಶತ ಶೇಕಡಾ 80 ಅಂಕಗಳನ್ನು ಪಡೆದ ಮಕ್ಕಳು ಈ ಪ್ರಶಸ್ತಿಯನ್ನು ಪಡೆಯಲು ಅರ್ಹರು. ಆಸಕ್ತಿಯಿಂದ ಹೆಸರು ನೊಂದಾಯಿಸಬಹುದು ಸಂಪರ್ಕಿಸಿ ಆಯಾ ತಾಲೂಕು ಅಧ್ಯಕ್ಷರು ಜಿಲ್ಲಾಧ್ಯಕ್ಷರು ಹೆಸರು ನೋಂದಾಯಿಸಬಹುದು. ಈ ನಂಬರಿಗೆ ಕರೆ ಮಾಡಿ. 98801744902 ಸಂಪರ್ಕಿಸಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ನಾಡಿನ ಸಾಹಿತಿಗಳು, ಚಿಂತಕರು, ಚಲನಚಿತ್ರ ನಟರು ಹಾಗೂ ಜನಪ್ರತಿನಿಧಿಗಳು, ಮಾಧ್ಯಮ ಸಲಹೆಗಾರರು ನಾಡಿನ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು