5:45 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಡಿಸೆಂಬರ್ 21ರಿಂದ ಕರಾವಳಿ ಉತ್ಸವ; 28, 29ರಂದು ಬೀಚ್ ಉತ್ಸವ; ಜನವರಿ 4 ಮತ್ತು 5ರಂದು ಯುವ ಉತ್ಸವ

09/12/2024, 21:35

ಮಂಗಳೂರು(reporterkarnataka.com): ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕøತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕøತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಡಿಸೆಂಬರ್ 28 ಹಾಗೂ 29ರಂದು ಪಣಂಬೂರು/ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಜನವರಿ 4 ಮತ್ತು 5 ರಂದು ಕದ್ರಿಪಾರ್ಕ್‍ನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ಯುವ ಸಮೂಹದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ “ಯುವ ಉತ್ಸವ” ನಡೆಯಲಿದೆ. ಜನವರಿ 17 ಮತ್ತು 18 ರಂದು ಆಕರ್ಷಕ ಗಾಳಿಪಟ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ವೈವಿಧ್ಯಮಯ ತಿಂಡಿ-ತಿನಿಸುಗಳ ಆಹಾರ ಮೇಳವನ್ನು ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕೃತಿ ಮತ್ತು ನದಿ ನೀರು ಸೌಂದರ್ಯವನ್ನು ಆಸ್ವಾಧಿಸಲು ನದಿ ಉತ್ಸವ ಕಾರ್ಯಕ್ರಮವನ್ನು ಹರೇಕಳದಲ್ಲಿ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕರಾವಳಿ ಉತ್ಸವ ಯಶಸ್ವಿಗೊಳಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ತಕ್ಷಣದಿಂದಲೇ ಸಮಿತಿಯವರು ಕಾರ್ಯಪ್ರವೃತ್ತರಾಗಿ ಸಾಗಬೇಕೆಂದು ಅವರು ಸೂಚಿಸಿದರು.
ಈ ಸಲ ಕರಾವಳಿ ಉತ್ಸವದಲ್ಲಿ ಹಿಂದಿಗಿಂತಲೂ ವಿಭಿನ್ನವಾಗಿ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ವೃತ್ತಿಪರ ಕಲಾಸಾಧಕರನ್ನು ಒಳಗೊಂಡ ಕಾರ್ಯಕ್ರಮದ ರೂಪುರೇಷೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಡಿಸಿಪಿ ಸಿದ್ದಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸು ವರಿಷ್ಠಾಧಿಕಾರಿ ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಮುಡಾ ಆಯುಕ್ತ ನೂರ್ ಜಹಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು