6:43 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಡಿ.30: ಕಡಲನಗರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ‘ಮಂಗಳೂರು ಕಂಬಳ’

28/12/2023, 18:27

ಮಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಸೇನಾಧಿಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ಮಂಗಳೂರು ಕಂಬಳ ನಗರದ ಕೂಳೂರು ಬಳಿಯ ಗೋಲ್ಡ್ ಪಿಂಚ್ ಸಿಟಿಯಲ್ಲಿ ಡಿ.30ರಂದು ನಡೆಯಲಿದೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಇತರ ಪದಾಧಿಕಾರಿಗಳು ಈ ಕುರಿತು ವಿವರ ನೀಡಿದರು.


ಮಂಗಳೂರು ಬ್ರಾಂಡ್ ಅಭಿವೃದ್ಧಿ ಪಡಿಸುವ ಉದ್ದೇಶದಿಂದ 7 ವರ್ಷಗಳ ಹಿಂದೆ ಮಂಗಳೂರು ನಗರದೊಳಗೆ ಮಂಗಳೂರು ಕಂಬಳ ಆರಂಭಿಸಲಾಯಿತು. ಇದಕ್ಕಾಗಿ ಗೋಲ್ಡ್ ಪಿಂಚ್ ಸಿಟಿಯೊಳಗೆ ಕರೆ ನಿರ್ಮಿಸಲಾಯಿತು. ಕಳೆದ 6 ವರ್ಷಗಳಿಂದ ನಡೆಸಲಾಗುತ್ತಿದೆ. ಈ ಬಾರಿ 7 ವರ್ಷದ ಕಂಬಳ ಸಂಪನ್ನಗೊಳ್ಳಲಿದೆ. ಕಂಬಳ ವೀಕ್ಷಕರಿಗೆ ಅನುಕೂಲವಾಗಲು ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವೀಕ್ಷಕರಿಗೆ ಗ್ಯಾಲರಿ ವ್ಯವಸ್ಥೆ ಇದೆ ಎಂದು ಅವರು ವಿವರಿಸಿದರು.
ಕಂಬಳವನ್ನು ಡಿ.30ರಂದು ಚಿತ್ರದುರ್ಗ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಉದ್ಘಾಟಿಸುವರು. ಬಂಟ್ವಾಳದ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಮ ಪೂಜಾರಿ ಅಧ್ಯಕ್ಷತೆ ವಹಿಸುವರು. ಕಂಕನಾಡಿ ಬ್ರಹ್ಮ ಬೈದರ್ಕಳ ಗರೋಡಿ ಅಧ್ಯಕ್ಷ ಕೆ. ಚಿತ್ತರಂಜನ್ ದೀಪ ಪ್ರಜ್ವಲನೆ ಮಾಡುವರು. ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ದಿವ್ಯ ಉಪಸ್ಥಿತಿ ಇರುವರು. ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಕಟೀಲು ದೇಗುಲದ
ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ಕೂಳೂರು ಬೀಡಿನ ವಜ್ರ ಕರ್ಣಂತಾಯ ಬಳ್ಳಾಲ್, ಗುತ್ತಿನಾರ್ ಜಯರಾಂ ಶೆಟ್ಟಿ ಕುಡುಂಬೂರು, ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ಪ್ರಭು, ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ ಐ.ಎನ್. ರೈ, ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ‌ ಕರ್ನಲ್ ಶರತ್ ‌ಭಂಡಾರಿ, ಮಾಜಿ ಶಾಸಕ‌ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಸಂಚಾಲಕ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಕೋಶಾಧಿಕಾರಿ ದೊಡ್ಡಮನೆ ಪ್ರೀತಮ್ ರೈ, ಈಶ್ವರ ಶೆಟ್ಟಿ, ಗೌರವ ಸಲಹೆಗಾರ ವಿಜಯ ಕುಮಾರ್ ಕಂಗಿನಮನೆ, ಉಪಾಧ್ಯಕ್ಷ ಸಂಜಯ ಪ್ರಭು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು