9:32 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಡಿ.8ರಿಂದ 12: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ; ಮೇಳೈಸಲಿದೆ ಸರ್ಮ ಧರ್ಮ ಸಮ್ಮೇಳ, ಸಾಹಿತ್ಯ ಸಮ್ಮೇಳನ

29/11/2023, 20:30

ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಜತೆಗೆ ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಡಿ.8ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್‌ ನಂದನ್‌ ಅವರು ಪ್ರೌಢಶಾಲಾ ಆವರಣದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿ ದಿನ ಸಂಜೆ 6 ರಿಂದ ಪ್ರದರ್ಶನ ಸ್ಥಳದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 7ರಿಂದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ತಂಡದವರು ಹಾಡು, ನೃತ್ಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಡಿ.11ರಂದು ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ವಾಗ್ಮಿ ಮತ್ತು ವಿದ್ವಾಂಸ ಗುರುರಾಜ ಕರ್ಜಗಿ ಉದ್ಘಾಟಿಸಲಿದ್ದಾರೆ.
ಡಿಸೆಂಬರ್ 11 ರಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಸುಪ್ರೀಂ ಕೋರ್ಟ್ ವಕೀಲ ಎಂ.ಆರ್.ವೆಂಕಟೇಶ್ ಮತ್ತು ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ಮಹಮ್ಮದ್ ಗೌಸ್ ಹವಾಲ್ದಾರ್ ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಬೆಂಗಳೂರಿನ ಅನುರಾಧಾ ವಿಕ್ರಾಂತ್ ಮತ್ತು ತಂಡ ರಾತ್ರಿ 8.30 ರಿಂದ ಬ್ಯಾಲೆ ನೃತ್ಯ ನೀಡಲಿದೆ. ಸಂಜೆ 5 ಗಂಟೆಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಉದ್ಘಾಟಿಸುವರು. ಡಿಸೆಂಬರ್ 12 ರಂದು ಖ್ಯಾತ ಗಮಕಿ ಎ.ವಿ. ಪ್ರಸನ್ನ ಬೆಂಗಳೂರು, ಹೊನ್ನಾವರದ ನಿವೃತ್ತ ಪ್ರಾಧ್ಯಾಪಕ ಶ್ರೀಪಾದ್ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಬಂಟ್ವಾಳದ ಸಾಹಿತಿ ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡಲಿದ್ದಾರೆ. ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ತಂಡದವರು ರಾತ್ರಿ 8.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಡಿಸೆಂಬರ್ 12 ರ ಮಧ್ಯರಾತ್ರಿಯಿಂದ ಲಕ್ಷ ದೀಪೋತ್ಸವದ ಸಾಂಪ್ರದಾಯಿಕ ದೀಪಗಳ ಬೆಳಗುವಿಕೆ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್‌ಗಳನ್ನು ನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು