10:05 AM Sunday24 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು