8:38 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ದೀಪಾವಳಿ ಉಡುಗೋರೆ: ವಿಕಲಚೇತನಿಗೆ ತ್ರಿಚಕ್ರ ವಾಹನ ಹಸ್ತಾಂತರಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/10/2022, 21:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದೀಪಾವಳಿ ಹಬ್ಬದ ಉಡುಗೊರೆಯಾಗಿ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹಣಮಂತ ಕುರುಬರ ಎಂಬ ವಿಕಲಾಂಗ ಚೇತನ ಯುವಕನಿಗೆ ವೈಯುಕ್ತಿಕವಾಗಿ ಮಾಜಿ ಡಿಸಿಎಂ ‌ಹಾಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ತ್ರಿಚಕ್ರ ವಾಹನ ಹಸ್ತಾಂತರಿಸಿದರು.

ಇದೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಖಾಸಗಿ ಸುದ್ದಿವಾಹಿನಿ ಕಾರ್ಯಕ್ರಮ ಒಂದರಲ್ಲಿ ವಿಕಲ ಚೇತನ ಹಣಮಂತ ಕುರುಬರ ತನ್ನ ಅಳಲನ್ನ ತೋಡಿಕೊಂಡಿದ್ದನ್ನ ಮನಗಂಡು ಹಣಮಂತನಿಗೆ ತ್ರಿಚಕ್ರ ವಾಹನ ನೀಡುವ ಭರವಸೆ ನೀಡಿದ್ದೆ ಅದರಂತೆ ಇಂದು ದೀಪಾವಳಿ ಹಬ್ಬದ ಉಡುಗೊರೆಯಾಗಿ ಹಣಮಂತನಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದು ಸಂತಸದ ವಿಷಯ, ಇಂಥಹ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲಾ ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರದಲ್ಲಿ ಇರುವ ವಿಕಲ ಚೇತನರನ್ನ ಗುರುತಿಸಿ ಅವರಿಗೆ ತ್ರಿಚಕ್ರ ವಾಹನ ಕಲ್ಪಿಸುವ ಭರವಸೆ ನೀಡಿದರು.


ಯುವ ಮುಖಂಡ ಚಿದಾನಂದ ಸವದಿ, ಪುರಸಭೆ ಸದಸ್ಯರಾದ ರಾಜಶೇಖರ ಗೂಡೊಡಗಿ, ಕಲ್ಲೇಶ್ ಮಡ್ಡಿ, ನ್ಯಾಯವಾದಿ ನಿಂಗಪ್ಪಾ ಖೋಕಲೆ, ಮಾಹಾತೇಶ ಠಕ್ಕಣ್ಣವರ, ಆಸಿಫ್ ತಾಂಬೊಳಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು